ಕೇರಳದ ಪ್ರಾಂತೀಯ ಹಬ್ಬವಾದ ಓಣಂ ಹಬ್ಬದ ಆಚರಣೆಯನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲೂ ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಹೂವಿನ ರಂಗೋಲಿ ಬಿಡಿಸುವುದು ಹಾಗೂ ವಿವಿಧ ಮನೋರಂಜನಾ ಆಟಗಳನ್ನು ನಡೆಸಲಾಯಿತು. ಮಧ್ಯಾಹ್ನ ಓಣಂ ವಿಶೇಷ ಊಟವನ್ನು ಸವಿಯಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಸಂಘಟಿಸಿದರು.