FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday, 28 January 2017

ಕುಳೂರು ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರೂಪೀಕರಣ

             ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಮಹಾಸಭೆ ನಡೆಯಿತು.
ಶಾಲಾ ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಹಳೆ ವಿದ್ಯಾರ್ಥಿಗಳ ಸಂಘದ ರೂಪೀಕರಣವಾಯಿತು. ಅಧ್ಯಕ್ಷರಾಗಿ ಶ್ರೀ  ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷರಾಗಿ  ಶ್ರೀ ಚಿಕ್ಕಪ್ಪ ಶೆಟ್ಟಿ ಹಾಗೂ ಶ್ರೀಮತಿ ಕೃಷ್ಣವೇಣಿ, ಕಾರ್ಯದರ್ಶಿಯಾಗಿ ಶ್ರೀ ಹರಿರಾಮ್ ಕುಳೂರು, ಜತೆ ಕಾರ್ಯದರ್ಶಿಗಳಾಗಿ ಶ್ರೀ ವಸಂತ ಪೂಜಾರಿ ಕುಳೂರು ಹಾಗೂ ಉಷಾ ಪೂಂಜ, ಕೋಶಾಧಿಕಾರಿಯಾಗಿ ಶ್ರೀ ಜಗದೀಶ ಶೆಟ್ಟಿ ಮಾಸ್ಟರ್ ಕುಳೂರು ಅವಿರೋಧವಾಗಿ ಆಯ್ಕೆಯಾದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ ಸ್ವಾಗತಿಸಿ, ಸೌಮ್ಯ ಪಿ ವಂದಿಸಿದರು. ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮವನ್ನು ನಿರ್ವಹಿಸಿದರು.








Friday, 27 January 2017

ಶಾಲಾ ಸಂರಕ್ಷಣಾ ಯಜ್ಞ

       ಶಾಲಾ ಸಂರಕ್ಷಣಾ ಯಜ್ಞದ ಅಂಗವಾಗಿ ಶಾಲೆಯಲ್ಲಿ ವಿಶೇಷ ಅಸೆಂಬ್ಲಿಯನ್ನು ನಡೆಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ ರವರು ಮಕ್ಕಳಿಗೆ ಶಾಲಾ ಸಂರಕ್ಷಣಾ ಯಜ್ಞದ ಪ್ರತಿಜ್ಞೆಯನ್ನು ಭೋಧಿಸಿದರು.


Thursday, 26 January 2017

68ನೇ ಗಣರಾಜ್ಯೋತ್ಸವ ಆಚರಣೆ

         ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 68 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
         ಆ ಪ್ರಯುಕ್ತ ನಡೆದ ಧ್ವಜಾರೋಹಣವನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ದೇಶದ ಜನಾಧಿಪತ್ಯಕ್ಕೆ ಅಂಕಿತ ಹಾಕಿದ ಡಾ. ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನವು ಭಾರತೀಯರೆಲ್ಲರೂ ಸಮಾನತೆಯಿಂದ ಬದುಕಲು ಸಾಧ್ಯವಾಗುವಂತೆ ಮಾಡಿದೆ. ಇದನ್ನು ನಾವೆಲ್ಲರೂ ಕಾಪಾಡಿಕೊಂಡು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕರೆಕೊಟ್ಟರು. ಶಾಲೆಯ ಮಾಜಿ ಪಿ.ಟಿ.ಎ ಅಧ್ಯಕ್ಷ ಶ್ರೀ ಹರಿರಾಮ್ ಕುಳೂರು, ಶ್ರೀ ರಘುನಾಥ್ ಕೆ, ಶಾಲಾ ಅಧ್ಯಾಪಿಕೆಯರಾದ ಶ್ರೀಮತಿ ಸೌಮ್ಯ ಪಿ, ಕುಮಾರಿ ಶ್ವೇತ ಕುಳೂರು ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ ಸ್ವಾಗತಿಸಿ, ಶಾಲಾ ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು. ಬಳಿಕ ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.







Friday, 13 January 2017

ಶಾಲಾ ಹಳೆ ವಿದ್ಯಾರ್ಥಿಗಳ ಸಭೆ

           ನಮ್ಮ ಶಾಲೆಯ ಹಳೆ ವಿದ್ಯಾರ್ಥಿಗಳನ್ನು ಒಟ್ಟು ಸೇರಿಸಿ ಶಾಲಾಭಿವೃದ್ಧಿ ಕಾರ್ಯಗಳೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಸಾಮಾಜಿಕವಾಗಿ ಗುರುತಿಸಿಕೊಳ್ಳವ ಉದ್ದೇಶದಿಂದ ಹಳೆ ವಿದ್ಯಾರ್ಥಿಗಳ ಸಭೆಯನ್ನು ಕರೆಯಲಾಯಿತು. ಹಲವಾರು ಮಂದಿ ಈ ಸಭೆಯಲ್ಲಿ ಭಾಗವಹಿಸಿ ಸಲಹೆ-ಸೂಚನೆಗಳನ್ನಿತ್ತು ಸಹಕರಿಸಿದರು. ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ ಸ್ವಾಗತಿಸಿ, ಅಧ್ಯಾಪಿಕೆ ಶ್ರೀಮತಿ ಸೌಮ್ಯ ಪಿ ವಂದಿಸಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರ್ವಹಿಸಿದರು.




Wednesday, 11 January 2017

ಆರೋಗ್ಯ ತಪಾಸಣಾ ಶಿಬಿರ

         ಮೀಂಜ ಪಂಚಾಯತಿನ ಆರೋಗ್ಯ ಕೇಂದ್ರದ ನೇತೃತ್ವದಲ್ಲಿ ಶಾಲಾ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವು ಶಾಲಾ ಸಭಾಂಗಣದಲ್ಲಿ ನಡೆಯಿತು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ತಪಾಸಣೆಯನ್ನು ನಡೆಸಿದರು.