FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday 26 February 2017

ಮೇಲೈಸಿದ ಶಾಲಾ ವಾರ್ಷಿಕೋತ್ಸವ

         ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ವಿಜೃಂಭಣೆಯಿಂದ ಜರಗಿತು.
         ಬೆಳಗ್ಗೆ ಶ್ರೀ ಗೋಪಾಲ ಶೆಟ್ಟಿ ಪೊಯ್ಯೆಲುರವರು ಧ್ವಜಾರೋಹಣಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನಿತ್ತರು. ಬಳಿಕ ಶಾಲಾ ಪ್ರವೇಶ ದ್ವಾರದ ಗೇಟಿಗೆ ಹಾಕಿದ ಕಮಾನನ್ನು ಕೊಡುಗೆ ನೀಡಿದ ಶ್ರೀಮತಿ ಕುಸುಮ ಚಿಕ್ಕಪ್ಪ ಶೆಟ್ಟಿ ಚಾರ್ಲ ರವರು ಹಾಗೂ ಹೊಸದಾಗಿ ನಿರ್ಮಾಣಗೊಂಡ ವೇದಿಕೆಯನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ ರವರು ಅನಾವರಣಗೊಳಿಸಿದರು.
          ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮವನ್ನು ಮಂಜೇಶ್ವರ ಶಾಸಕ ಶ್ರೀ ಪಿ.ಬಿ ಅಬ್ದುಲ್ ರಝಾಕ್ ಉದ್ಘಾಟಿಸಿ 'ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಉಳಿಸಿ ಬೆಳೆಸಲು ಊರವರು ಕೈ ಜೋಡಿಸಬೇಕಾದುದು ಅನಿವಾರ್ಯ' ವೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀಂಜ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶ್ರೀಮತಿ ಶಂಶಾದ್ ಶುಕೂರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕಾಸರಗೋಡು ಜಿಲ್ಲಾ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀ ಹರ್ಷಾದ್ ವರ್ಕಾಡಿ 'ಸಾರ್ವಜನಿಕ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭಿಮಾನಿಗಳ ಕೂಡುವಿಕೆಯಿಂದ ಗ್ರಾಮವೊಂದು ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಿದೆ' ಎಂದು ನುಡಿದರು.
          ಕಾರ್ಯಕ್ರಮದಲ್ಲಿ ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯೆ ಶ್ರೀಮತಿ ಆಶಾಲತಾ ಬಿ.ಯಂ, ಮೀಂಜ ಗ್ರಾಮ ಪಂಚಾಯತಿನ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ಶೋಭ ಸೋಮಪ್ಪ, ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಶ್ರೀ ನಂದಿಕೇಶನ್ ಯನ್, ಕ್ಷೇತ್ರ ನಿರೂಪಣಾಧಿಕಾರಿ ಶ್ರೀ ವಿಜಯಕುಮಾರ್ ಪಿ, ಕುಳೂರು ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಮಹಮ್ಮದ್ ಕಂಚಿಲ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ, ಶಾಲಾ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಮಮತಾ ಉಪಸ್ಥಿತರಿದ್ದು ಶುಭ ಕೋರಿದರು. ಇದೇ ಸಂದರ್ಭದಲ್ಲಿ ಕುಳೂರು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯೋಪಾಧ್ಯಾಯರಿಗೆ ಗೌರವಾರ್ಪಣೆ ಮಾಡಲಾಯಿತು. ಜೊತೆಗೆ ರಾಷ್ಟ್ರೀಯ ಮಟ್ಟದ ತ್ರೋ ಬಾಲ್ ಚಾಂಪ್ಯನ್ ಶಿಪ್ ನಲ್ಲಿ ನಾಲ್ಕನೇ ಸ್ಥಾನ ಪಡೆದ ಶಾಲಾ ಹಳೆ ವಿದ್ಯಾರ್ಥಿ ಬಸವರಾಜ್ ರವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಪಿ ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು. ಶಾಲಾ ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಹರಿರಾಮ ಕುಳೂರು ಸ್ವಾಗತಿಸಿ, ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ವಂದಿಸಿದರು. ಶಾಲಾ ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ವನ್ನು ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ಹಾಗೂ ಶಾಲಾ ಹಳೇ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ರೀತಿಯ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮಗಳು ಜರಗಿದವು. 'ನಮ್ಮ ಟಿ.ವಿ' 'ಬಲೇ ತೆಲಿಪಾಲೆ' ಖ್ಯಾತಿಯ ಅರಸು ಕಲಾವಿದೆರ್ ಅಭಿನಯದ 'ತೆಲಿಕೆದ ಬರ್ಸ' ಕಾರ್ಯಕ್ರಮ ನಡೆಯಿತು.

































Sunday 19 February 2017

ಕುಳೂರು ಶಾಲಾ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

            ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು.
           ಕ್ರೀಡಾಕೂಟವನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಮಹಮ್ಮದ್ ಕಂಚಿಲರವರ ಅಧ್ಯಕ್ಷತೆಯಲ್ಲಿ ಶ್ರೀ ರಘುರಾಮ ಸುಲಾಯ ಕೇಮಜಾಲ್'ರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ ಹಾಗೂ ಶ್ರೀಮತಿ ಕೃಷ್ಣವೇಣಿ ಪಾದೆ ಕುಳೂರು, ಕಾರ್ಯದರ್ಶಿಯಾದ ಶ್ರೀ ಹರಿರಾಮ ಕುಳೂರು, ಜತೆ ಕಾರ್ಯದರ್ಶಿಯಾದ ಶ್ರೀ ವಸಂತ ಪೂಜಾರಿ ಕುಳೂರು ಹಾಗೂ ಶ್ರೀಮತಿ ಉಷಾ ಪೂಂಜ ಕುಳೂರು ಮಾನೂರು, ಕೋಶಾಧಿಕಾರಿಯಾದ ಶ್ರೀ ಜಗದೀಶ್ ಶೆಟ್ಟಿ ಎಲಿಯಾಣ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ ಸ್ವಾಗತಿಸಿ, ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು. ಕ್ರೀಡಾಕೂಟವನ್ನು ಶಾಲಾ ಅಧ್ಯಾಪಿಕೆಯರಾದ ಶ್ರೀಮತಿ ಸೌಮ್ಯ ಪಿ, ಕುಮಾರಿ ಶ್ವೇತಾ, ಕ್ರೀಡಾಕೂಟದ ಉಸ್ತುವಾರಿ ವಹಿಸಿದ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಹಾಗೂ ಶ್ರೀ ರಘುನಾಥ ಮಾಸ್ಟರ್ ನೇತೃತ್ವ ವಹಿಸಿದರು. ಎಲ್ಲಾ ವಿಭಾಗಗಳಲ್ಲಿ ವಿವಿಧ ರೀತಿಯ ಕ್ರೀಡಾ ಸ್ಪರ್ಧೆಗಳು ನಡೆದವು.










Thursday 9 February 2017

ಶಾಲಾ ಲೋಗೋ ಹಾಗೂ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

        ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಪ್ರಯುಕ್ತ ಶಾಲೆಯ 'ಲೋಗೋ'ವನ್ನು ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ ರವರು ಶಾಲಾ ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ ರವರಿಗೆ ನೀಡುವ ಮೂಲಕ ಅನಾವರಣ ಮಾಡಿದರು. ಇದೇ ಸಂದರ್ಭದಲ್ಲಿ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ ರವರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮಹಮ್ಮದ್ ಕಂಚಿಲರವರಿಗೆ ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಮಮತಾ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ಹರಿರಾಮ ಕುಳೂರು, ಉಪಾಧ್ಯಕ್ಷರಾದ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಉಪಕಾರ್ಯದರ್ಶಿ ಶ್ರೀ ವಸಂತ ಪೂಜಾರಿ, ಪದಾಧಿಕಾರಿಗಳಾದ ಶ್ರೀ ಶೇಖ್ ಅಬ್ದುಲ್ ಮಜೀದ್, ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಶ್ರೀ ಲಿಂಗಪ್ಪ ದಾಸ್, ಶಾಲಾ ಅಧ್ಯಾಪಕರಾದ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ, ಶ್ರೀಮತಿ ಸೌಮ್ಯ ಪಿ, ಕುಮಾರಿ ಶ್ವೇತ ಕುಳೂರು ಉಪಸ್ಥಿತರಿದ್ದರು.














Saturday 4 February 2017

ಶಾಲಾ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ

         ಶಾಲಾ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಶಾಲಾ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕಾರಿ ಸಮಿತಿಯ ಸಭೆಯನ್ನು ಕರೆಯಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮಹಮ್ಮದ್ ಕಂಚಿಲರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶ್ರೀ ವಿನೋದ್ ಕುಮಾರ್ ಬಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಕಾರ್ಯದರ್ಶಿ ಶ್ರೀ ಹರಿರಾಮ ಕುಳೂರು,  ಉಪಕಾರ್ಯದರ್ಶಿ ಶ್ರೀ ವಸಂತ ಪೂಜಾರಿ, ಸಮಿತಿ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ವಾರ್ಷಿಕೋತ್ಸವದ ವಿವಿಧ ಕಾರ್ಯಕ್ರಮಗಳಿಗೆ ವಿವಿಧ ಸಮಿತಿಗಳನ್ನು ರೂಪೀಕರಿಸಲಾಯಿತು.