FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday 30 June 2017

ವಿದ್ಯಾರಂಗ ಹಾಗೂ ಬಾಲಸಭೆಯ ಉದ್ಘಾಟನೆ

              ನಮ್ಮ ಶಾಲೆಯಲ್ಲಿ 2017-18 ನೇ ಸಾಲಿನ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆ ಹಾಗೂ ಬಾಲಸಭೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
               ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ ರವರು 'ಮಕ್ಕಳ ಸುಪ್ತ ಪ್ರತಿಭೆಯನ್ನು ಪ್ರದರ್ಶಿಸಲು ಇದೊಂದು ಉತ್ತಮ ವೇದಿಕೆ, ಇದರೊಂದಿಗೆ ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತಾಗುವುದು' ಎಂದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ರವರು ಮಕ್ಕಳಿಂದ ರಚಿತವಾದ 'ಅಕ್ಷರ ದೀವಿಗೆ' ಹಸ್ತಪತ್ರಿಕೆಯನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ, ಶಾಲಾ ನಾಯಕಿ ಕುಮಾರಿ ಶ್ರೇಯಾ ಕರ್ಕೇರ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ವಿದ್ಯಾರ್ಥಿ ಲಕ್ಷ್ಮಣ ಸ್ವಾಗತಿಸಿ, ಕುಮಾರಿ ಶ್ರೇಯಾ ಕರ್ಕೇರ ವಂದಿಸಿದರು. ವಿದ್ಯಾರ್ಥಿನಿ ಕುಮಾರಿ ಭುವನ ಕೆ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಜರಗಿದವು.


















Thursday 29 June 2017

ಪ್ರಜಾಪ್ರಭುತ್ವದ ಪರಿಕಲ್ಪನೆಯಲ್ಲಿ ಮೂಡಿದ ಶಾಲಾ ನಾಯಕನ ಆಯ್ಕೆಯ ಚುನಾವಣೆ

          ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಚುನಾವಣೆಯ ಮೂಲಕ ಶಾಲಾ ನಾಯಕನನ್ನು ಆಯ್ಕೆ ಮಾಡಲಾಯಿತು.
          ಮಕ್ಕಳಲ್ಲಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೂಡಿಸುವ ಉದ್ದೇಶದಿಂದ ಶಾಲಾ ಚುನಾವಣೆಯನ್ನು ನಡೆಸಿ ನೈಜ ಅನುಭವವನ್ನು ಪಡೆಯಲು ಶಾಲಾ ನಾಯಕನ ಆಯ್ಕೆಗೆ ಶಾಲಾ ಚುನಾವಣೆಯ ಕಾರ್ಯ ತಂತ್ರವನ್ನು ಬಳಸಲಾಯಿತು. ಶಾಲಾ ಚುನಾವಣೆಯ ಪ್ರಯುಕ್ತ ಮುನ್ನಾ ದಿನ ಸ್ಪರ್ಧಿಸುವ ಅಭ್ಯರ್ಥಿಗಳು ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮರುದಿನ ನಡೆದ ಚುನಾವಣೆಯಲ್ಲಿ ಶಾಲಾ ಮಕ್ಕಳು ಸರದಿ ಸಾಲಿನಲ್ಲಿ ಬಂದು ತಮ್ಮ ನೆಚ್ಚಿನ ಅಭ್ಯರ್ಥಿಗೆ ತಮ್ಮ ಮತವನ್ನು ಸಲ್ಲಿಸಿದರು.
          ಬಹಳ ಶಿಸ್ತುಬದ್ಧವಾಗಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಮಕ್ಕಳು ತಮ್ಮ ನೆಚ್ಚಿನ ಅಭ್ಯರ್ಥಿಗೆ ಮತ ಹಾಕುವ ಸಂದರ್ಭದಲ್ಲಿ ತಮ್ಮ ಕೈ ಬೆರಳಿಗೆ ಚುನಾವಣಾ ಗುರುತನ್ನು ಹಾಕಿಸಿಕೊಂಡು ಗೌಪ್ಯ ಮತದಾನದ ಮೂಲಕ ಮತ ಚಲಾಯಿಸಿದರು. ಈ ಎಲ್ಲಾ ಪ್ರಕ್ರಿಯೆಯಲ್ಲಿ ಮಕ್ಕಳೇ ಕಾರ್ಯ ನಿರ್ವಹಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕುಮಾರಿ ನಾಗರತ್ನ, ಸಾನ್ವಿಕ, ದುರ್ಗಾಪ್ರಸಾದ್, ವರ್ಷ ಮೊದಲಾದವರು ಈ ಕಾರ್ಯದಲ್ಲಿ ಸಹಕರಿಸಿದರು.
          ಬಳಿಕ ನಡೆದ ಮತ ಎಣಿಕಾ ಪ್ರಕ್ರಿಯೆಯು ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಶಾಲಾ ಮುಖ್ಯೋಪಾಧ್ಯಾಯರ ಸಮ್ಮುಖದಲ್ಲಿ ನಡೆಯಿತು. ಬಳಿಕ ಫಲಿತಾಂಶವನ್ನು ಪ್ರಕಟಿಸಿದಾಗ ವಿಜೇತ ಅಭ್ಯರ್ಥಿಯ ಬೆಂಬಲಿಗರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ವಿಜಯ ಯಾತ್ರೆಯನ್ನು ಕೈಗೊಳ್ಳುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ಶಾಲಾ ನಾಯಕಿಯಾಗಿ ಕುಮಾರಿ ಶ್ರೇಯಾ ಕರ್ಕೇರ ಹಾಗೂ ಉಪನಾಯಕ ಮತ್ತು ಆರೋಗ್ಯ ಮಂತ್ರಿಯಾಗಿ ಶ್ರವಣ್ ಕುಮಾರ್ ಆಯ್ಕೆಯಾದರು. ಸಾಂಸ್ಕೃತಿಕ ಕಲಾ ಮಂತ್ರಿಯಾಗಿ ಕುಮಾರಿ ಭುವನ ಕೆ ಹಾಗೂ ಕ್ರೀಡಾ ಮಂತ್ರಿಯಾಗಿ ಲಕ್ಷ್ಮಣ ಆಯ್ಕೆಯಾದರು. ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯರು ಹೂಗುಚ್ಛ ನೀಡಿ ಅಭಿನಂದಿಸಿದರು. ಬಳಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ ರವರು ಪ್ರಮಾಣ ವಚನ ಬೋಧಿಸಿದರು. ಶಾಲಾ ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ, ಶ್ರೀಮತಿ ಸೌಮ್ಯ ಪಿ, ಕುಮಾರಿ ಶ್ವೇತಾ ಹಾಗೂ ಕುಮಾರಿ ರೇಷ್ಮ ರವರು ಸಹಕರಿಸಿದರು.

















Friday 23 June 2017

ಶಾಲಾ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

        ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2017-18 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ನಡೆಯಿತು.
         ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ, ಮಾತೃ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಲೋಚನ ಉಪಸ್ಥಿತರಿದ್ದರು. ಶಾಲಾ ಅಧ್ಯಾಪಿಕೆ ಶ್ರೀಮತಿ ಸೌಮ್ಯ ಪಿ ಕಳೆದ ಶೈಕ್ಷಣಿಕ ವರ್ಷದ ಶಾಲಾ ವರದಿಯನ್ನು ಮಂಡಿಸಿದರು. ಬಳಿಕ ಈ ವರ್ಷದ ನೂತನ ರಕ್ಷಕ-ಶಿಕ್ಷಕ ಸಂಘ ಹಾಗೂ ಮಾತೃ ಮಂಡಳಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ಹಾಗೂ ಉಪಾಧ್ಯಕ್ಷರಾಗಿ ಶ್ರೀ ಉಮೇಶ್ ಕುಳೂರು ರವರು ಅವಿರೋಧವಾಗಿ ಆಯ್ಕೆಯಾದರು. ಸದಸ್ಯರಾಗಿ ಸೌಮ್ಯಲತಾ, ಸುಲೋಚನ, ರಘುನಾಥ್, ಆಶಾಲತಾ, ಸುನೀತಾ, ಯಶೋಧ ಕುಳೂರು, ಮೀನಾಕ್ಷಿ, ಶೋಭಾ, ಲಲಿತ, ಕಮಲಾಕ್ಷಿ ಹಾಗೂ ಯಶೋಧ ಪೊಯ್ಯೆಲ್ ಆಯ್ಕೆಯಾದರು.
          ಮಾತೃ ಮಂಡಳಿಯ ಅಧ್ಯಕ್ಷೆಯಾಗಿ ಶ್ರೀಮತಿ ಆಶಾಲತಾ ಕುಳೂರು ಹಾಗೂ ಉಪಾಧ್ಯಕ್ಷೆಯಾಗಿ ಶ್ರೀಮತಿ ಸೌಮ್ಯಲತಾ ಕುಳಿಂಜ ಅವಿರೋಧವಾಗಿ ಆಯ್ಕೆಯಾದರು. ಸದಸ್ಯೆರಾಗಿ ಸುಲೋಚನಾ, ಮೀನಾಕ್ಷಿ, ಯಶೋಧ ಕುಳೂರು, ಕುಸುಮ, ರೇಷ್ಮ, ಬೇಬಿ, ಸುರೇಖ, ಕಮಲಾಕ್ಷಿ, ಶೋಭಾ, ಯಶೋಧ ಪೊಯ್ಯೆಲ್, ಲಲಿತ ಹಾಗೂ ಸುನಿತಾ ರವರು ಆಯ್ಕೆಯಾದರು.
            ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ ರವರು ಸ್ವಾಗತಿಸಿದರು. ಶಾಲಾ ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.



ವಾಚನಾ ಸಪ್ತಾಹದ ಸಮಾರೋಪ

                  ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನಾ ಸಪ್ತಾಹದ ಸಮಾರೋಪ ಸಮಾರಂಭ ಸಡೆಯಿತು.
                   ಆ ಪ್ರಯುಕ್ತ ನಡೆದ ಕಾರ್ಯಕ್ರಮವನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ ರವರು ಉದ್ಘಾಟಿಸಿ ಮಾತನಾಡುತ್ತಾ 'ಕೇರಳದಲ್ಲಿ ಗ್ರಂಥಾಲಯಗಳ ಸೃಷ್ಟಿಕರ್ತನೆಂದೇ ಕರೆಯಲ್ಪಡುವ ಪಿ.ಯನ್ ಪಣಿಕ್ಕರ್ ರವರು ಕೇರಳದಲ್ಲಿ ಮಾಡಿದ ಸಾಧನೆಗೆ ಸಾವಿರಾರು ಗ್ರಂಥಾಲಯಗಳೇ ಸಾಕ್ಷಿಗಳಾಗಿವೆ' ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ ರವರು ಮಾತನಾಡಿ 'ಮಕ್ಕಳಲ್ಲಿ ಓದಿನ ಹವ್ಯಾಸಗಳು ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಅವರಲ್ಲಿ ಓದಿನ ಕುರಿತಾಗಿ ಹೆಚ್ಚಿನ ಆಸಕ್ತಿಯನ್ನು ಹುಟ್ಟು ಹಾಕಲು ವಾಚನಾ ಸಪ್ತಾಹದಲ್ಲಿ ನಡೆಸಿದ ವಿವಿಧ ಚಟುವಟಿಕೆಗಳು ಸಹಕಾರಿಯಾಗಿದೆ. ಹಾಗಾಗಿ ಇದನ್ನು ಇನ್ನೂ ಮುಂದುವರಿಸಲು ಈ ವರ್ಷ ಪಕ್ಷಾಚರಣೆಯಾಗಿ ಆಚರಿಸಲಾಗುತ್ತಿದೆ' ಎಂದರು. ಇದೇ ಸಂದರ್ಭದಲ್ಲಿ ವಾಚನಾ ಸಪ್ತಾಹದ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಶಾಲಾ ಅಧ್ಯಾಪಿಕೆ ಶ್ರೀಮತಿ ಸೌಮ್ಯ ಪಿ ಸ್ವಾಗತಿಸಿ, ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.








ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ

                  ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರದಿಂದ ಲಭಿಸಿದ ಉಚಿತ ಸಮವಸ್ತ್ರವನ್ನು ವಿತರಿಸುವ ಕಾರ್ಯಕ್ರಮ ಜರಗಿತು.
                  ಮೀಂಜ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಚಂದ್ರಾವತಿ ವಿ.ಪಿ ರವರು ಮಕ್ಕಳಿಗೆ ಉಚಿತ ಸಮವಸ್ತ್ರವನ್ನು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ, ಮಾತೃ ಮಂಡಳಿ ಉಪಾಧ್ಯಕ್ಷೆ ಶ್ರೀಮತಿ ಸುಲೋಚನಾ ಉಪಸ್ಥಿತರಿದ್ದರು. ಶಾಲಾ ಅಧ್ಯಾಪಿಕೆ ಶ್ರೀಮತಿ ಸೌಮ್ಯ ಪಿ ಸ್ವಾಗತಿಸಿ, ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.




Wednesday 21 June 2017

ವಿಶ್ವ ಯೋಗ ದಿನಾಚರಣೆ

                   ನಮ್ಮ ಶಾಲೆಯಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.
                    ಆ ಪ್ರಯುಕ್ತ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ ರವರು ಯೋಗದ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಜೊತೆಗೆ ಹಲವು ಯೋಗಾಭ್ಯಾಸಗಳನ್ನು ಮಕ್ಕಳಿಗೆ ಮಾಡಿಸಿದರು. ಶಾಲಾ ಅಧ್ಯಾಪಕರಾದ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ, ಶ್ರೀಮತಿ ಸೌಮ್ಯ ಪಿ, ಕುಮಾರಿ ರೇಷ್ಮ ಹಾಗೂ ಕುಮಾರಿ ಶ್ವೇತಾ ಉಪಸ್ಥಿತರಿದ್ದು ಸಹಕರಿಸಿದರು.