FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday 14 November 2018

ಗಣಿತ ಪ್ರಯೋಗಶಾಲೆ ಹಾಗೂ ತರಗತಿ ಗ್ರಂಥಾಲಯ ಉದ್ಘಾಟನೆ

       ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಿತದ ಪ್ರಯೋಗಶಾಲೆ ಹಾಗೂ ತರಗತಿ ಗ್ರಂಥಾಲಯಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
      ಗಣಿತ ಪ್ರಯೋಗಶಾಲೆಯನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ ಉದ್ಘಾಟಿಸಿದರು. ತರಗತಿ ಗ್ರಂಥಾಲಯವನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ ಆಗಮಿಸಿದ್ದರು. ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಚಿನಾಲ, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.




ಮಕ್ಕಳ ದಿನಾಚರಣೆ

       ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.
       ಕಾರ್ಯಕ್ರಮದ ಉದ್ಘಾಟನೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್.ವಿ ಆಗಮಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಚಿನಾಲ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಶಾಲಾ ಹಳೆ ವಿದ್ಯಾರ್ಥಿ ನಿಕ್ಷಿತ ಪೊಯ್ಯೆಲ್ ರವರನ್ನುಶಾಲು ಹೊದಿಸಿ, ಸ್ಮರಣಿಕೆಯೊಂದಿಗೆ ಪ್ರೋತ್ಸಾಹ ಧನವನ್ನು ನೀಡಿ ಅಭಿನಂದಿಸಲಾಯಿತು. ಬಳಿಕ ಮಕ್ಕಳ ದಿನಾಚರಣೆಯ ಪ್ರಯುಕ್ತ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ 'ಬದಲಾಗಬೇಕು' ಎಂಬ ವಿನೂತನ ನೃತ್ಯ ನಾಟಕ ಪ್ರದರ್ಶನಗೊಂಡಿತು.



Tuesday 30 October 2018

ಮಾದರಿ ಬಾಲ ಕೃಷಿಕ

         ಕೃಷಿಯೆಂದರೆ ಮಾರು ದೂರ ಉಳಿಯುವ ಇಂದಿನ ಯುವಪೀಳಿಗೆಯನ್ನು ನಾಚಿಸುವಂತೆ ಬಾಲಕನೊಬ್ಬ ತನ್ನ ಮನೆಯಂಗಳದಲ್ಲಿ ಇರುವ ಸ್ವಲ್ಪವೇ ಜಾಗದಲ್ಲಿ ಕೃಷಿ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಕುಳೂರು ಆದರ್ಶ ನಗರದ ಲಿಂಗಪ್ಪ ದಾಸ್ ಹಾಗೂ ಸುಜಾತಾ ದಂಪತಿಯ ಪುತ್ರನಾಗಿರುವ ದುರ್ಗಾಪ್ರಸಾದ್ ತನ್ನ ಮನೆಯಂಗಳದಲ್ಲಿ ಭತ್ತ ಹಾಗೂ ತರಕಾರಿ ಕೃಷಿಯನ್ನು ಮಾಡಿ ಸೈ ಎನಿಸಿಕೊಂಡಿರುವನು. ಮನೆಯವರ ಹಾಗೂ ಶಾಲಾ ಅಧ್ಯಾಪಕರ ಸಲಹೆ ಸಹಕಾರದೊಂದಿಗೆ ಶಾಲೆಯಲ್ಲಿ ಸಿಕ್ಕಿದ ತರಕಾರಿ ಬೀಜ ಹಾಗೂ ಭತ್ತವನ್ನು ತಾನೊಬ್ಬನೇ ವ್ಯವಸ್ಥಿತವಾಗಿ ಬೀಜ ಬಿತ್ತಿ, ನೀರುಣಿಸಿ, ಫಲ ಬರುವ ವರೆಗೆ ಪೋಷಿಸಿ ಎಲ್ಲರನ್ನೂ ನಿಬ್ಬೆರಗಾಗುವಂತೆ ಮಾಡಿದ್ದಾನೆ. ತಾನು ಬೆಳೆಸಿದ ತರಕಾರಿ ಗಿಡಗಳಿಂದ ಫಸಲನ್ನು ಹೆತ್ತವರಿಗೆ ನೀಡಿದಾಗ ಮಗನ ಈ ಕೈಂಕರ್ಯಕ್ಕೆ ಅವರು ತಲೆದೂಗಿದರು. ಕೇವಲ ಕೃಷಿಯ ಆಸಕ್ತಿ ಮಾತ್ರವಲ್ಲದೆ ಚಿತ್ರಕಲೆಯಲ್ಲೂ ತನ್ನ ಪ್ರತಿಭೆಯನ್ನು ತೋರಿಸಿದ ಈತ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿಯಾಗಿರುವನು. ಇತ್ತೀಚೆಗೆ  ಶಾಲೆಯ ಮಕ್ಕಳು ಹಾಗೂ ಅಧ್ಯಾಪಕ ವೃಂದ ಕೃಷಿ ತೋಟಕ್ಕೆ ಭೇಟಿ ನೀಡಿ ಪ್ರೋತ್ಸಾಹಿಸಿದರು.  ಈತನ ಈ ಸಾಧನೆಗೆ ಎಲ್ಲರಿಂದಲೂ ಮೆಚ್ಚುಗೆ ಗಳಿಸಿರುವನು.



Tuesday 2 October 2018

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

       ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
      ಶಾಲಾ ಮಕ್ಕಳು, ಅಧ್ಯಾಪಕ ವೃಂದ ಹಾಗೂ ಎಂ.ಜಿ.ಎನ್.ಆರ್.ಇ.ಜಿ.ಎ ಕುಳೂರು ಘಟಕದವರು ಶಾಲಾ ಪರಿಸರ ಶುಚೀಕರಣಗೊಳಿಸಿದರು. ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ, ಮಾಜಿ ವಾರ್ಡ್ ಸದಸ್ಯ ಜಗನ್ನಾಥ, ಶಾಲಾ ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ, ಶಿಕ್ಷಕಿಯರಾದ ಸೌಮ್ಯ ಪಿ, ಅಶ್ವಿನಿ ಎಲಿಯಾಣ, ರಮೀಝ ಉಪಸ್ಥಿತರಿದ್ದರು.



Wednesday 5 September 2018

ಶಿಕ್ಷಕರ ದಿನಾಚರಣೆ

      ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.  ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಸರ್ವಪಲ್ಲಿ ರಾಧಾಕೃಷ್ಣನ್ ರವರ ಜೀವನ ಸಾಧನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ವಿವರಿಸಿದರು. ಬಳಿಕ ಶಾಲಾ ಮಕ್ಕಳು ಶಿಕ್ಷಕರಿಗೆ ವಿವಿಧ ಮನೋರಂಜನಾ ಆಟಗಳನ್ನು ಆಡಿಸಿದರು.




Wednesday 15 August 2018

ಶಾಲಾ ಮಕ್ಕಳಿಂದ ನೆರೆ ಪರಿಹಾರ ನಿಧಿ ಕೊಡುಗೆ

       ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳು ಕೇರಹದಲ್ಲುಂಟಾಗಿರುವ ಜಲಪ್ರಳಯದ ಸಂತಸ್ತರಿಗೆ ಸಹಾಯ ಧನ ಕೊಡುಗೆ ನೀಡುವ ಮೂಲಕ ಮಾನವೀಯ ಮೆರೆದರು.
       ಈ ನಿಟ್ಟಿನಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ಸಹಾಯ ಧನ ಸಂಗ್ರಹ ಪ್ರಕ್ರಿಯೆ ಕೈಗೊಂಡು ಸಂಗ್ರಹ ಮೊತ್ತವನ್ನು ಮುಖ್ಯಮಂತ್ರಿಯವರ ನೆರೆಪರಿಹಾರ ನಿಧಿಯ ಖಾತೆಗೆ ಶಾಲಾ ಉಪನಾಯಕನಾದ ಕಾರ್ತಿಕ್ ಕೆ ಯವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದ ಪ್ರಬಂಧಕರಿಗೆ ಚೆಕ್ ಹಸ್ತಾಂತರ ಮಾಡುವ ಮೂಲಕ ನೆರವೇರಿಸಲಾಯಿತು. ನಿಧಿ ಸಂಗ್ರಹದ ಸಮಯದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ ಕೊಜಮುಕು, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಉಪಾಧ್ಯಕ್ಷೆ ಸುನಿತಾ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಚಿನಾಲ‌, ಪಿ.ಟಿ.ಎ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.



ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 72 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮಕ್ಕಳಿಂದ ಆಕರ್ಷಕ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಕ್ಕಳು ಹಾಕಿದ ಸ್ವಾತಂತ್ರ್ಯ ಹೋರಾಟಗಾರರ ವೇಷ ಎಲ್ಲರ ಗಮನ ಸೆಳೆಯಿತು. ಬಳಿಕ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರು ನೆರವೇರಿಸಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ, ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಚಿನಾಲ‌, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು ಉಪಸ್ಥಿತರಿದ್ದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲರವರು ಶಾಲಾ ಪ್ರೀ ಪ್ರೈಮರಿ ಮಕ್ಕಳಿಗೆ ಕೊಡಮಾಡಿದ ಆಸನಗಳನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಾಲಾ ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು. ಇದೇ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಶಶಿಕುಮಾರ್ ಕುಳೂರು ನಿರ್ದೇಶನದ 'ವನ್ ಇಂಡಿಯಾ' ವೀಡಿಯೋ ಪ್ರದರ್ಶನ ನಡೆಯಿತು.



























Monday 13 August 2018

ದಿನಂಪ್ರತಿ ರಸಪ್ರಶ್ನೆ

       ಶಾಲಾ ಅಸೆಂಬ್ಲಿಯಲ್ಲಿ ದಿನಂಪ್ರತಿ ರಸಪ್ರಶ್ನೆಗಳನ್ನು ಕೇಳುವ ಮೂಲಕ ಮಕ್ಕಳ ಜ್ಞಾನ ಭಂಡಾರವನ್ನು ಹೆಚ್ಚಿಸುವ ಚಟುವಟಿಕೆಯನ್ನು ನಡೆಸಲಾಗುತ್ತಿದೆ. ಮಕ್ಕಳನ್ನು ಇನ್ನಷ್ಟು ಉತ್ತೇಜಿಸುವ ದೃಷ್ಟಿಯಲ್ಲಿ ಪ್ರತಿ ತಿಂಗಳ ಕೊನೆಗೆ ನಡೆಯುವ ಬಾಲಸಭೆಯಲ್ಲಿ ರಸಪ್ರಶ್ನಾ ಸ್ಪರ್ಧೆಯನ್ನು ನಡೆಸಿ, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಗುತ್ತದೆ.





Sunday 12 August 2018

ಶಾಲಾ ಪರಿಸರ ಶುಚೀಕರಣ

         ಸ್ವಾತಂತ್ರ್ಯೋತ್ಸವ ಆಚರಣೆಯ ಪ್ರಯುಕ್ತ ಶಾಲಾ ಶಿಕ್ಷಕ ವೃಂದ, ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಿಂದ ಶಾಲಾ ಪರಿಸರ ಶುಚೀಕರಣ ನಡೆಯಿತು.









Wednesday 8 August 2018

ಸ್ವಾತಂತ್ರ್ಯೋತ್ಸವದ ಪೂರ್ವ ಸಭೆ

ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಪ್ರಯುಕ್ತ ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಪೂರ್ವ ಸಭೆಯನ್ನು ಕರೆಯಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಉಪಾಧ್ಯಕ್ಷೆ ಸುನೀತ ಕುಳೂರು, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಚಿನಾಲ‌, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷರಾದ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಜತೆ ಕಾರ್ಯದರ್ಶಿ ವಸಂತ ಪೂಜಾರಿ ಕುಳೂರು, ಗೌರವ ಸಲಹೆಗಾರರಾದ ನಾರಾಯಣ ನೈಕ್ ನಡುಹಿತ್ಲು, ಪಿ.ಟಿಎ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಸ್ವಾತಂತ್ರ್ಯೋತ್ಸವವನ್ನು ಎಲ್ಲರ ಸಹಕಾರದೊಂದಿಗೆ ನಡೆಸುವುದೆಂದು ತೀರ್ಮಾನಿಸಲಾಯಿತು. ಜೊತೆಗೆ ಎಲ್ಲರ ಒಗ್ಗೂಡುವಿಕೆಯಿಂದ ಒಂದು ದಿನ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲೂ ತೀರ್ಮಾನಿಸಲಾಯಿತು. ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.