FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday 31 January 2018

ರಕ್ಷಕರ ತರಬೇತಿ ಶಿಬಿರ:

             ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ಷಕರಿಗಿರುವ ತಿಳುವಳಿಕಾ ತರಬೇತಿ ಶಿಬಿರ ನಡೆಯಿತು.
             ಕಾರ್ಯಕ್ರಮವನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸಿದ್ದರು. ಶಾಲಾ ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು, ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಸೌಮ್ಯ ಪಿ ತರಗತಿ ನಡೆಸಿ ಕೊಟ್ಟರು. ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶ್ವೇತಾ ಎಲಿಯಾಣ ವಂದಿಸಿದರು.





ಮಧುರ ಕನ್ನಡ ವಿಜಯ ಘೋಷಣೆ:

            ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 'ಮಧುರ ಕನ್ನಡ ವಿಜಯ ಘೋಷಣೆ' ಕಾರ್ಯಕ್ರಮ ನಡೆಯಿತು.
            ಕಾರ್ಯಕ್ರಮವನ್ನು ವಾರ್ಡ್ ಸದಸ್ಯೆಯಾದ ಚಂದ್ರಾವತಿ ವಿ.ಪಿ ರವರು ಉದ್ಘಾಟಿಸಿ 'ಸಾರ್ವಜನಿಕ ಶಿಕ್ಷಣ ಯಜ್ಞದ ಭಾಗವಾಗಿ ನಡೆಯುವ ಇಂತಹ ಕಾರ್ಯಕ್ರಮಗಳು ಮಕ್ಕಳನ್ನು ಇನ್ನಷ್ಟು ಮುಂದೆ ಬರುವಂತೆ ಮಾಡಿದೆ. ಎಲ್ಲರಿಗೂ ಅಂಗೀಕಾರ ದೊರೆತು ಶಾಲೆಯು ಉತ್ತಮ ಫಲಿತಾಂಶವನ್ನು ಪಡೆಯಲು ಸಾಧ್ಯವಾಗುತ್ತಿದೆ' ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸಿದ್ದರು. ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು, ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಉಪಸ್ಥಿತರಿದ್ದರು. ವಾರ್ಡ್ ಸದಸ್ಯೆ ಮಧುರ ಕನ್ನಡದ ಮಕ್ಕಳಿಗೆ ಕೆಲವು ಓದುವಿಕೆಯ ಕಾರ್ಡುಗಳನ್ನು ಕೊಟ್ಟು ಓದಿಸಿದರು. ಮಕ್ಕಳು ಓದಿದುದನ್ನು ಕಂಡು ವಿಜಯ ಘೋಷಣೆ ಮಾಡಲಾಯಿತು. ಎಲ್ಲಾ ರಕ್ಷಕರು ಇದಕ್ಕೆ ಸಾಕ್ಷಿಯಾದರು. ಶಾಲಾ ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.







ಶಾಲಾ ಮಕ್ಕಳ ಕ್ರೀಡಾಕೂಟ:

               ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರಗಿದವು. ಎಲ್ಲಾ ಮಕ್ಕಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಶಶಿಕುಮಾರ್ ಕುಳೂರು ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ಶಾಲಾ ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ, ಸೌಮ್ಯ ಪಿ, ರೇಷ್ಮ ಕೆ, ಶ್ವೇತಾ ಎಲಿಯಾಣ ಉಪಸ್ಥಿತರಿದ್ದು ಸಹಕರಿಸಿದರು.








Sunday 28 January 2018

ವಾರ್ಷಿಕೋತ್ಸವದ ಪ್ರಯುಕ್ತ ಹಳೆ ವಿದ್ಯಾರ್ಥಿಗಳ ಹಾಗೂ ಊರವರ ಕ್ರೀಡಾಕೂಟ

            ನಮ್ಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಹಳೆ ವಿದ್ಯಾರ್ಥಿಗಳ ಹಾಗೂ ಊರವರ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು.
           ಕ್ರೀಡಾಕೂಟವನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಕಂಚಿಲರವರ ಅಧ್ಯಕ್ಷತೆಯಲ್ಲಿ ಸಲೀಂ ಮಾಸ್ಟರ್ ರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಿ.ಟಿಎ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು, ಉಪಾಧ್ಯಕ್ಷ ಉಮೇಶ್ ಕುಕ್ಕಿಮಾರ್, ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರರಾದ ನಾರಾಯಣ ನೈಕ್ ನಡುಹಿತ್ಲು, ಉಪಾಧ್ಯಕ್ಷರಾದ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ ಹಾಗೂ ಶ್ರೀಮತಿ ಕೃಷ್ಣವೇಣಿ ಪಾದೆ ಕುಳೂರು, ಜತೆ ಕಾರ್ಯದರ್ಶಿಯಾದ ಶ್ರೀ ವಸಂತ ಪೂಜಾರಿ ಕುಳೂರು ಹಾಗೂ ಶ್ರೀಮತಿ ಉಷಾ ಪೂಂಜ ಕುಳೂರು ಮಾಣೂರು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು. ಕ್ರೀಡಾಕೂಟವನ್ನು ಶಾಲಾ ಅಧ್ಯಾಪಿಕೆಯರಾದ ರೇಷ್ಮ ಕುಬನೂರು, ಕುಮಾರಿ ಶ್ವೇತಾ, ಕ್ರೀಡಾಕೂಟದ ಉಸ್ತುವಾರಿಯನ್ನು ಜಯರಾಜ್ ಶೆಟ್ಟಿ ಚಾರ್ಲ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಹಾಗೂ ಶಶಿ ಕುಮಾರ್ ಕುಳೂರು ನೇತೃತ್ವ ವಹಿಸಿದರು. ಎಲ್ಲಾ ವಿಭಾಗಗಳಲ್ಲಿ ವಿವಿಧ ರೀತಿಯ ಕ್ರೀಡಾ ಸ್ಪರ್ಧೆಗಳು ನಡೆದವು.












ಉಚಿತ ವೈದ್ಯಕೀಯ ಶಿಬಿರ:

          ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೈಲ್ಯಾಂಡ್ ಆಸ್ಪತ್ರೆ ಮಂಗಳೂರು, ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರವು ನಡೆಯಿತು.
         ವೈದ್ಯಕೀಯ ಶಿಬಿರದ ಉದ್ಘಾಟನೆಯನ್ನು ಸಂತಡ್ಕ ಶ್ರೀ ಅರಸು ಸಂಕಲ ದೈವಸ್ಥಾನದ ಅಧ್ಯಕ್ಷರಾದ ಡಾ| ಶ್ರೀಧರ ಭಟ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಡಾ| ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ, ಹೈಲ್ಯಾಂಡ್ ಆಸ್ಪತ್ರೆಯ ನಿರ್ದೇಶಕರಾದ ಡಾ| ಅಬ್ದುಲ್ಲಾ ಯಾಸಿರ್, ಸಿ.ಇ.ಒ ಮೊಹಮ್ಮದ್ ಯೂನಸ್, ವೈದ್ಯರುಗಳಾದ ಡಾ| ಅಹ್ಮದ್ ರಿಝ್ವಾನ್, ಡಾ| ಶಿಹಾಬ್ ಹಸನ್, ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ, ಶಾಲಾ ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಅಭಿಜಿತ್ ಶೆಟ್ಟಿ ಕೊಂಡಾಣರವರು ಸ್ವಾಗತಿಸಿ, ಜತೆ ಕಾರ್ಯದರ್ಶಿ ವಸಂತ ಪೂಜಾರಿ ವಂದಿಸಿದರು. ಬಳಿಕ ಹಲ್ಲು, ಎಲುಬು, ಹೃದಯ, ಮಧುಮೇಹ, ಕಣ್ಣು, ಮೂಗು, ಗಂಟಲು ಹಾಗೂ ಜನರಲ್ ವಿಭಾಗಗಳಲ್ಲಿ ನುರಿತ ತಜ್ಞರಿಂದ ತಪಾಸಣೆ ನಡೆಸಲಾಯಿತು.

















Friday 26 January 2018

ಸಂಭ್ರಮದ 69ನೇ ಗಣರಾಜ್ಯೋತ್ಸವ ಆಚರಣೆ:

                  ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 69 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
                  ಆ ಪ್ರಯುಕ್ತ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ದೇಶವು ಜಾನಾಧಿಪತ್ಯ ಆಡಳಿತವನ್ನು ಕಾಣಲು ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಎಂಬಂತೆ ಪ್ರಜಾಪ್ರಭುತ್ವದ ಆಡಳಿತದಲ್ಲಿರುವುದೇ ನಮ್ಮ ಸೌಭಾಗ್ಯ. ಇದನ್ನು ನಾವೆಲ್ಲರೂ ಕಾಪಾಡಿಕೊಂಡು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು. ಶಾಲೆಯ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಕುಮಾರ್ ಶಾಲೆದಪಡ್ಪು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷರಾದ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಕೃಷ್ಣವೇಣಿ ಕುಳೂರು, ಗೌರವ ಸಲಹೆಗಾರರಾದ ನಾರಾಯಣ ನೈಕ್ ನಡುಹಿತ್ಲು, ಸದಸ್ಯರಾದ ಸುಬ್ರಾಯ ಆಚಾರ್ಯ ಕುಳೂರು, ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಕುಮಾರಿ ಶ್ವೇತ ಕುಳೂರು, ಜಲಜ ಪೊಯ್ಯೆಲ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಾಲಾ ಅಧ್ಯಾಪಿಕೆ ಸೌಮ್ಯ ಪಿ ವಂದಿಸಿದರು. ಬಳಿಕ ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.