FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday 1 June 2017

ಮಾದರಿ ಶಾಲೋದ್ಯಾನ ಉದ್ಘಾಟನೆ

                   ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಎಸ್.ಎ ಸಹಾಯದೊಂದಿಗೆ ಮಾದರಿ ಶಾಲೋದ್ಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
                   ಮೀಂಜ ಗ್ರಾಮ ಪಂಚಾಯತ್ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀ ಕೃಷ್ಣ ಕೊಮ್ಮಂಗಳ ರವರು ಗಿಡ ನೆಡುವ ಮೂಲಕ ಮಾದರಿ ಶಾಲೋದ್ಯಾನದ ಉದ್ಘಾಟನೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ ಮೀಂಜ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಂಶಾದ್ ಶುಕೂರ್, ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ, ವಾರ್ಡ್ ಮಟ್ಟದ ಎಜುಕೇಶನ್ ವರ್ಕಿಂಗ್ ಗ್ರೂಪ್ ಸದಸ್ಯೆ ಶ್ರೀಮತಿ ಸುಚಿತ್ರ ಎಸ್ ಆಳ್ವ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಟಿ.ಡಿ ಸದಾಶಿವ ರಾವ್, ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷರಾದ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಶ್ರೀಮತಿ ಕೃಷ್ಣವೇಣಿ, ಪ್ರಧಾನ ಕಾರ್ಯದರ್ಶಿ ಶ್ರೀ ಹರಿರಾಮ ಕುಳೂರು, ಉಪ ಕಾರ್ಯದರ್ಶಿ ಶ್ರೀ ವಸಂತ ಪೂಜಾರಿ ಕುಳೂರು, ಶ್ರೀಮತಿ ಉಷಾ ಪೂಂಜ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ, ಶಾಲಾ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಮಮತಾ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಶ್ರೀ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಬಿ.ಆರ್. ಸಿ ತರಬೇತುದಾರರಾದ ಸಂಜು ಹಾಗೂ ಸಜಿತ, ಅಬ್ದುಲ್ ಮಜೀದ್ ಸಾಹೇಬ್, ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಯಾದ ಶ್ರೀ ನಂದಿಕೇಶನ್ ಯನ್ ಹಾಗೂ ಕ್ಷೇತ್ರ ನಿರೂಪಣಾಧಿಕಾರಿ ಶ್ರೀ ವಿಜಯ್ ಕುಮಾರ್ ಪಿ ರವರು ಭೇಟಿ ನೀಡಿ ಶಾಲೋದ್ಯಾನದ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ ಸ್ವಾಗತಿಸಿ, ಅಧ್ಯಾಪಿಕೆ ಶ್ರೀಮತಿ ಸೌಮ್ಯ ಪಿ ವಂದಿಸಿದರು. ಶಾಲಾ ಅಧ್ಯಾಪಕರಾದ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.





No comments:

Post a Comment