FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday 4 February 2018

ಊರ ಹಬ್ಬವಾದ ಶಾಲಾ ವಾರ್ಷಿಕೋತ್ಸವ:

             ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವವು ವಿಜೃಂಭಣೆಯಿಂದ ನಡೆದು ಊರ ಹಬ್ಬದ ಸಂಭ್ರಮವನ್ನು ತಂದಿತು. ಶಾಲಾ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಶಾಲಾ ವೇದಿಕೆಯ ನೂತನ ಅಂಕ ಪರದೆಯ ಅನಾವರಣವನ್ನು ಕೊಡುಗೆ ನೀಡಿದ ಮೋಹನ್ ಶೆಟ್ಟಿ ಮಜ್ಜಾರ್ ನೆರವೇರಿಸಿರು.
            ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮವನ್ನು ಕಾಸರಗೋಡು ಜಿಲ್ಲಾ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಉದ್ಘಾಟಿಸಿ 'ಸಾರ್ವಜನಿಕ ಶಿಕ್ಷಣ ರಂಗದಲ್ಲಿ ವಿದ್ಯಾಭ್ಯಾಸವು ಕೇವಲ ಕಲಿಕೆಯಾಗದೆ ಸೃಜನಾತ್ಮಕ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸಿ ‌ಕ್ರೀಯಾಶೀಲರಾಗುತ್ತಿದ್ದಾರೆ. ಮಾನವನು ಅಸಾಧ್ಯವೆಂದು ಕೈಕಟ್ಟಿ ಕುಳಿತಿದ್ದರೆ ಎಷ್ಟೋ ಸಾಧಕರು ಬೆಳಕಿಗೆ ಬರುತ್ತಿರಲಿಲ್ಲ. ಇಂತಹ ಸಾಧಕರನ್ನು ಸೃಷ್ಟಿಸುವ ಸಾರ್ವಜನಿಕ ಶಾಲೆಗಳನ್ನು ಉಳಿಸಿ ಪ್ರೋತ್ಸಾಹಿಸುವ ಕರ್ತವ್ಯ ನಮ್ಮ ಮೇಲಿದೆ' ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯೆ ಆಶಾಲತಾ ಬಿ.ಯಂ, ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ, ಕಾಸರಗೋಡು ಉಪಜಿಲ್ಲಾ ವಿದ್ಯಾಧಿಕಾರಿ ನಂದಿಕೇಶನ್ ಯನ್, ಕ್ಷೇತ್ರ ನಿರೂಪಣಾಧಿಕಾರಿ ವಿಜಯಕುಮಾರ್ ಪಿ, ಮಧೂರು ಶಾಲಾ ಮುಖ್ಯೋಪಾಧ್ಯಾಯರಾದ ವಿನೋದ್ ಕುಮಾರ್ ಬಿ, ಉದ್ಯಮಿ ಪಿ.ಆರ್. ಶೆಟ್ಟಿ ಪೊಯ್ಯೆಲ್, ವಿಜಯಾ ಬ್ಯಾಂಕಿನ ನಿವೃತ್ತ ಮೆನೇಜರ್ ಜಯರಾಮ ಶೆಟ್ಟಿ ಎಲಿಯಾಣ, ತುಳು ಒಕ್ಕೂಟ ಬೆಂಗಳೂರಿನ ಕಾರ್ಯಕಾರಿ ಸದಸ್ಯರಾದ ಮಾಣೂರು ಸೀತಾರಾಮ ಶೆಟ್ಟಿ, ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್, ಸುಳ್ಯದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಮಾಧವ ಕುಳೂರು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು, ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಟಿ.ಡಿ. ಸದಾಶಿವ ರಾವ್, ನಿವೃತ್ತ ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ಭಟ್ ಹಾಗೂ ಗಣೇಶ್ ರಾವ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಶಾಲಾ ವಾರ್ಷಿಕ ವರದಿ ಮಂಡಿಸಿದರು. ಇದೇ ಸಂದರ್ಭದಲ್ಲಿ ಊರಿನ ಹಿರಿಯ ಕೃಷಿಕರಾದ ಚೌಕಾರು ಕುಳೂರು ಹಾಗೂ ಬಾಪ್ಪ ಕುಂಞಿ ಯವರನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಜೊತೆಗೆ ಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ಮಿಂಚಿದ ಶಾಲಾ ಪ್ರತಿಭೆಗಳನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಜಗದೀಶ್ ಶೆಟ್ಟಿ ಎಲಿಯಾಣ ಸ್ವಾಗತಿಸಿ, ಕಾರ್ಯದರ್ಶಿ ಹರಿರಾಮ ಕುಳೂರು ವಂದಿಸಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.
           ಬಳಿಕ ಸ್ಥಳೀಯ ಅಂಗನವಾಡಿ ಪುಟಾಣಿಗಳು, ಶಾಲಾ ಮಕ್ಕಳು ಹಾಗೂ ಹಳೆ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆಯಿತು. ನಂತರ ಯಶಸ್ವೀ ಕಲಾವಿದರು ಮಂಜೇಶ್ವರ ಅಭಿನಯಿಸಿದ 'ಅವು ಪನಿಯೆರೆ ಆಪುಜಿ' ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.
























ಕುಳೂರು ಶಾಲಾ ಭೋಜನ ಶಾಲಾ ಉದ್ಘಾಟನೆ:

               ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೀಂಜ ಪಂಚಾಯತ್ ವತಿಯಿಂದ ದೊರಕಿದ ನೂತನ ಭೋಜನ ಶಾಲಾ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
               ಭೋಜನ ಶಾಲಾ ಉದ್ಘಾಟನೆಯನ್ನು ಮೀಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಂಶಾದ್ ಶುಕೂರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೀಂಜ ಪಂಚಾಯತ್ ಕ್ಷೇಮ ಸ್ಥಾಯೀ ಸಮಿತಿ ಅಧ್ಯಕ್ಷೆಯಾದ ಶೋಭಾ ಸೋಮಪ್ಪ, ಪಂಚಾಯತ್ ಅಸಿಸ್ಟೆಂಟ್ ಸೆಕ್ರೆಟರಿ ಸತೀಶನ್, ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು, ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷೆ ಕೃಷ್ಣವೇಣಿ ಪಾದೆ ಕುಳೂರು, ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್ ಉಪಸ್ಥಿತರಿದ್ದರು. ಶಾಲಾ ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶ್ವೇತಾ ಎಲಿಯಾಣ ವಂದಿಸಿದರು. ಶಾಲಾ ಶಿಕ್ಷಕಿ ಸೌಮ್ಯ ಪಿ ಕಾರ್ಯಕ್ರಮ ನಿರೂಪಿಸಿದರು.




Thursday 1 February 2018

ಅಕಾಡೆಮಿಕ್ ಮಾಸ್ಟರ್ ಪ್ಲಾನ್ 2017-18 ರಿಂದ 2019-20 ರ ಮಂಡನೆ:

               ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಯೋಜನೆಯ ಭಾಗವಾಗಿ ಸರಕಾರದ ಆದೇಶದಂತೆ 2017-18 ರಿಂದ 2019-20 ರ ವರೆಗಿನ ಅಕಾಡೆಮಿಕ್ ಮಾಸ್ಟರ್ ಪ್ಲಾನ್ ಮಂಡನೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಶಾಲಾ ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಅಕಾಡೆಮಿಕ್ ಮಾಸ್ಟರ್ ಪ್ಲಾನ್ ಮಂಡನೆ ಮಾಡಿದರು. ಕಾರ್ಯಕ್ರಮದಲ್ಲಿ ಪಿ.ಟಿ.ಎ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು,ಶಿಕ್ಷಕ ವೃಂದ ಉಪಸ್ಥಿತರಿದ್ದರು.





ಶಾಲಾ ವಾರ್ಷಿಕೋತ್ಸವದ ತಯಾರಿ:

          ಶಾಲಾ ವಾರ್ಷಿಕೋತ್ಸವಕ್ಕೆ ತಯಾರಿ.... ಶಾಲಾ ಪಿ.ಟಿ.ಎ, ಹಳೆ ವಿದ್ಯಾರ್ಥಿ ಸಂಘಗಳ ಸಹಕಾರದೊಂದಿಗೆ ವಿವಿಧ ಕೆಲಸ ಕಾರ್ಯಗಳ ಕೆಲವು ತುಣುಕುಗಳು....