FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday 15 August 2018

ಶಾಲಾ ಮಕ್ಕಳಿಂದ ನೆರೆ ಪರಿಹಾರ ನಿಧಿ ಕೊಡುಗೆ

       ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳು ಕೇರಹದಲ್ಲುಂಟಾಗಿರುವ ಜಲಪ್ರಳಯದ ಸಂತಸ್ತರಿಗೆ ಸಹಾಯ ಧನ ಕೊಡುಗೆ ನೀಡುವ ಮೂಲಕ ಮಾನವೀಯ ಮೆರೆದರು.
       ಈ ನಿಟ್ಟಿನಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ಸಹಾಯ ಧನ ಸಂಗ್ರಹ ಪ್ರಕ್ರಿಯೆ ಕೈಗೊಂಡು ಸಂಗ್ರಹ ಮೊತ್ತವನ್ನು ಮುಖ್ಯಮಂತ್ರಿಯವರ ನೆರೆಪರಿಹಾರ ನಿಧಿಯ ಖಾತೆಗೆ ಶಾಲಾ ಉಪನಾಯಕನಾದ ಕಾರ್ತಿಕ್ ಕೆ ಯವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದ ಪ್ರಬಂಧಕರಿಗೆ ಚೆಕ್ ಹಸ್ತಾಂತರ ಮಾಡುವ ಮೂಲಕ ನೆರವೇರಿಸಲಾಯಿತು. ನಿಧಿ ಸಂಗ್ರಹದ ಸಮಯದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ ಕೊಜಮುಕು, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಉಪಾಧ್ಯಕ್ಷೆ ಸುನಿತಾ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಚಿನಾಲ‌, ಪಿ.ಟಿ.ಎ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.



ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 72 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮಕ್ಕಳಿಂದ ಆಕರ್ಷಕ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಕ್ಕಳು ಹಾಕಿದ ಸ್ವಾತಂತ್ರ್ಯ ಹೋರಾಟಗಾರರ ವೇಷ ಎಲ್ಲರ ಗಮನ ಸೆಳೆಯಿತು. ಬಳಿಕ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರು ನೆರವೇರಿಸಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ, ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಚಿನಾಲ‌, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು ಉಪಸ್ಥಿತರಿದ್ದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲರವರು ಶಾಲಾ ಪ್ರೀ ಪ್ರೈಮರಿ ಮಕ್ಕಳಿಗೆ ಕೊಡಮಾಡಿದ ಆಸನಗಳನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಾಲಾ ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು. ಇದೇ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಶಶಿಕುಮಾರ್ ಕುಳೂರು ನಿರ್ದೇಶನದ 'ವನ್ ಇಂಡಿಯಾ' ವೀಡಿಯೋ ಪ್ರದರ್ಶನ ನಡೆಯಿತು.



























Monday 13 August 2018

ದಿನಂಪ್ರತಿ ರಸಪ್ರಶ್ನೆ

       ಶಾಲಾ ಅಸೆಂಬ್ಲಿಯಲ್ಲಿ ದಿನಂಪ್ರತಿ ರಸಪ್ರಶ್ನೆಗಳನ್ನು ಕೇಳುವ ಮೂಲಕ ಮಕ್ಕಳ ಜ್ಞಾನ ಭಂಡಾರವನ್ನು ಹೆಚ್ಚಿಸುವ ಚಟುವಟಿಕೆಯನ್ನು ನಡೆಸಲಾಗುತ್ತಿದೆ. ಮಕ್ಕಳನ್ನು ಇನ್ನಷ್ಟು ಉತ್ತೇಜಿಸುವ ದೃಷ್ಟಿಯಲ್ಲಿ ಪ್ರತಿ ತಿಂಗಳ ಕೊನೆಗೆ ನಡೆಯುವ ಬಾಲಸಭೆಯಲ್ಲಿ ರಸಪ್ರಶ್ನಾ ಸ್ಪರ್ಧೆಯನ್ನು ನಡೆಸಿ, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಗುತ್ತದೆ.





Sunday 12 August 2018

ಶಾಲಾ ಪರಿಸರ ಶುಚೀಕರಣ

         ಸ್ವಾತಂತ್ರ್ಯೋತ್ಸವ ಆಚರಣೆಯ ಪ್ರಯುಕ್ತ ಶಾಲಾ ಶಿಕ್ಷಕ ವೃಂದ, ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಿಂದ ಶಾಲಾ ಪರಿಸರ ಶುಚೀಕರಣ ನಡೆಯಿತು.









Wednesday 8 August 2018

ಸ್ವಾತಂತ್ರ್ಯೋತ್ಸವದ ಪೂರ್ವ ಸಭೆ

ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಪ್ರಯುಕ್ತ ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಪೂರ್ವ ಸಭೆಯನ್ನು ಕರೆಯಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಉಪಾಧ್ಯಕ್ಷೆ ಸುನೀತ ಕುಳೂರು, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಚಿನಾಲ‌, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷರಾದ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಜತೆ ಕಾರ್ಯದರ್ಶಿ ವಸಂತ ಪೂಜಾರಿ ಕುಳೂರು, ಗೌರವ ಸಲಹೆಗಾರರಾದ ನಾರಾಯಣ ನೈಕ್ ನಡುಹಿತ್ಲು, ಪಿ.ಟಿಎ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಸ್ವಾತಂತ್ರ್ಯೋತ್ಸವವನ್ನು ಎಲ್ಲರ ಸಹಕಾರದೊಂದಿಗೆ ನಡೆಸುವುದೆಂದು ತೀರ್ಮಾನಿಸಲಾಯಿತು. ಜೊತೆಗೆ ಎಲ್ಲರ ಒಗ್ಗೂಡುವಿಕೆಯಿಂದ ಒಂದು ದಿನ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲೂ ತೀರ್ಮಾನಿಸಲಾಯಿತು. ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.