FLASH NEWS
Tuesday, 29 January 2019
Monday, 28 January 2019
ಸಂಸದರಿಂದ ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ನ ಉದ್ಘಾಟನೆ
ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲೋಕಸಭಾ ಸದಸ್ಯರ ಅನುದಾನ ನಿಧಿಯಿಂದ ದೊರೆತ ಕಂಪ್ಯೂಟರ್ ಹಾಗೂ ಪ್ರೋಜೆಕ್ಟರನ್ನು ಮಾನ್ಯ ಕಾಸರಗೋಡು ಸಂಸದರಾದ ಪಿ. ಕರುಣಾಕರನ್ ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು "ಮಾಹಿತಿ ತಂತ್ರಜ್ಞಾನವನ್ನು ಮಕ್ಕಳಲ್ಲಿ ಇನ್ನಷ್ಟು ಬಲಗೊಳಿಸಲು ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೆ ಕಂಪ್ಯೂಟರ್ ಹಾಗೂ ಪ್ರಾಜೆಕ್ಟ್ ಗಳನ್ನು ನೀಡುವುದರ ಮೂಲಕ ಶಿಕ್ಷಣ ಸಂಸ್ಥೆಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ" ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ ವಹಿಸಿದ್ದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಸದರನ್ನು ಶಾಲಾ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.
Sunday, 27 January 2019
Saturday, 26 January 2019
70 ನೇ ಗಣರಾಜ್ಯೋತ್ಸವ ಆಚರಣೆ
ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 70 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ ಶುಭಾಶಂಸನೆಗೈದರು. ಹಳೆ ವಿದ್ಯಾರ್ಥಿ ಸಂಘದ ಸದಸ್ಯ ರಫೀಕ್ ಪೊಯ್ಯಲ್, ಶಾಲಾ ಶಿಕ್ಷಕರಾದ ಜಯಪ್ರಶಾಂತ್ ಪಾಲೆಂಗ್ರಿ, ಸೌಮ್ಯ ಪಿ, ನಯನ ಎಂ, ಅಶ್ವಿನಿ ಎಲಿಯಾಣ, ರಮೀಝ ಉಪಸ್ಥಿತರಿದ್ದರು. ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.
Sunday, 13 January 2019
Sunday, 6 January 2019
ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲರವರಿಗೆ ಆಮಂತ್ರಣ ಪತ್ರಿಕೆ ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ, ಮಾತೃ ಮಂಡಳಿ ಅಧ್ಯಕ್ಷೆ ಆಶಾಲತ ಕುಳೂರು, ಉಪಾಧ್ಯಕ್ಷೆ ಸುನೀತ ಕುಳೂರು, ಶಾಲಾಭಿವೃದ್ಧಿ ಸಮಿತಿ ಸದಸ್ಯ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಕೃಷ್ಣವೇಣಿ ಪಾದೆ ಕುಳೂರು, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಜತೆ ಕಾರ್ಯದರ್ಶಿ ವಸಂತ ಪೂಜಾರಿ ಕುಳೂರು, ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಜಯರಾಜ್ ಶೆಟ್ಟಿ ಚಾರ್ಲ, ರಫೀಕ್ ಪೊಯ್ಯೆಲ್, ಶಶಿಕುಮಾರ್ ಕುಳೂರು, ಶಾಲಾ ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ, ಸೌಮ್ಯ ಪಿ, ನಯನ ಎಂ ಉಪಸ್ಥಿತರಿದ್ದರು.
Subscribe to:
Posts (Atom)