FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday, 20 February 2019

ಪಠನೋತ್ಸವ 2018-19


      ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 'ಪಠನೋತ್ಸವ 2018-19'  ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
       ಕಾರ್ಯಕ್ರಮವನ್ನು ಮೀಂಜ ಪಂಚಾಯತಿನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷರಾದ ಕೃಷ್ಣ ಕೆ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಜೇಶ್ವರ ಬಿ. ಆರ್. ಸಿ ಯ ತರಬೇತುದಾರ ಕೃಷ್ಣಪ್ರಕಾಶ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷ ಚಿಕ್ಕಪ್ಪ ಶೆಟ್ಟಿ ಎಲಿಯಾಣ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ಕಲಿಕಾ ಸಾಧನೆಯ ಪ್ರದರ್ಶನ ವಿಭಿನ್ನವಾಗಿ ಮೂಡಿ ಬಂದಿತು.






















Thursday, 14 February 2019

ಸಹಾಯ ಹಸ್ತ

*     ನಮ್ಮ ಕುಳೂರು ಶಾಲಾ ವಿದ್ಯಾರ್ಥಿಗಳಾದ ಕೀರ್ತಿ ಹಾಗೂ ದೀಕ್ಷಿತ್ ರವರ ತಂದೆ ಸಂತೋಷ್ ಕುಳೂರು ರವರು ಕೆಲ ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿ ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಕುಟುಂಬದ ಜವಾಬ್ದಾರಿ ಇವರ ಮೇಲಿದೆ. ಸಧ್ಯಕ್ಕೆ ಕೆಲಸಕ್ಕೆ ಹೋಗುವುದು ಕಷ್ಟ. ನಮ್ಮ ಶಾಲಾ ವತಿಯಿಂದ ಅವರಿಗೆ 25 ಕಿ. ಗ್ರಾಂ ಅಕ್ಕಿ ಹಾಗೂ ದಿನಸಿ ಸಾಮಾಗ್ರಿಗಳನ್ನು ನಮ್ಮ ಕೈಲಾದಷ್ಟು ಇಂದು ನೀಡಲಾಯಿತು.



*

Monday, 11 February 2019

ವಾರ್ಷಿಕೋತ್ಸವ ಅವಲೋಕನ ಸಭೆ

        ಶಾಲಾ ವಾರ್ಷಿಕೋತ್ಸವದ ಅವಲೋಕನ ಹಾಗೂ ಲೆಕ್ಕ ಪತ್ರ ಮಂಡನೆಯು ತಾ. 11-02-2019 ರಂದು ನಡೆಯಿತು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ವಾರ್ಷಿಕೋತ್ಸವದ ಯಶಸ್ವಿಗೆ ಕಾರಣಕರ್ತರಾದ ಎಲ್ಲಾ ವಿದ್ಯಾಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.


Sunday, 3 February 2019

ಶಾಲಾ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ

ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಮಕ್ಕಳು, ಅಧ್ಯಾಪಕ ವೃಂದ ಹಾಗೂ ಊರವರಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಸುಂದರ ಕ್ಷಣಗಳು...