FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday 30 January 2020

ಹುತಾತ್ಮ ದಿನಾಚರಣೆ

         ಇಂದು ಜನವರಿ 30, ಹುತಾತ್ಮ ದಿನ. ಭಾರತದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಚರಮ ದಿನ. ಆ ಪ್ರಯುಕ್ತ ನಮ್ಮ ಕುಳೂರು ಶಾಲೆಯಲ್ಲಿ ಮಹಾತ್ಮಾ ಗಾಂಧಿಯವರ ಪರಿಚಯ ಹಾಗೂ ದಿನದ ಮಹತ್ವದ ಕುರಿತು ಶಾಲಾ ಅಧ್ಯಾಪಿಕೆ ಸೌಮ್ಯ ಪಿ ರವರು ಮಕ್ಕಳಿಗೆ ತಿಳಿಸಿ ಕೊಟ್ಟರು. ಬಳಿಕ ಒಂದು ನಿಮಿಷ ಮೌನಾಚರಣೆ ಮಾಡಿ ಗೌರವ ಸಲ್ಲಿಸಲಾಯಿತು.


Sunday 26 January 2020

71 ನೇ ಗಣರಾಜ್ಯೋತ್ಸವ ಆಚರಣೆ

          ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 71 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
         ಆ ಪ್ರಯುಕ್ತ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ರವರು ನೆರವೇರಿಸಿ ದಿನದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಹಳೆ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ರಕ್ಷಕ-ಶಿಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಸಿಹಿತಿಂಡಿ ವಿತರಿಸಲಾಯಿತು.



Tuesday 14 January 2020

ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

          ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನಡೆಯಿತು.
          ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ, ಕಂಚಿಲರವರು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರಿಗೆ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಉಪಾಧ್ಯಕ್ಷೆ ಸುಪ್ರೀತ ಕುಳೂರು ಹೊಸಮನೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯೆಲ್, ಕೃಷ್ಣವೇಣಿ ಕುಳೂರು ಪಾದೆ, ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕುಳೂರು, ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ವಸಂತ ಪೂಜಾರಿ ಕುಳೂರು, ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಹರಿರಾಮ ಕುಳೂರು, ರಘುರಾಮ್ ಶೆಟ್ಟಿ ಎಲಿಯಾಣ, ಶಾಲಾ ನಾಯಕಿ ಕುಮಾರಿ ನವ್ಯ ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಫೆಬ್ರವರಿ 02 ರಂದು ನಡೆಯುವ ಶಾಲಾ ಹಳೆ ವಿದ್ಯಾರ್ಥಿಗಳ ಹಾಗೂ ಊರವರ ಕ್ರೀಡಾಕೂಟ ಹಾಗೂ ಫೆಬ್ರವರಿ 08 ರಂದು ನಡೆಯುವ ಶಾಲಾ ವಾರ್ಷಿಕೋತ್ಸವದ ಯಶಸ್ಸಿಗೆ ಕರೆ ನೀಡಲಾಯಿತು.




Friday 3 January 2020

ಪಂಚಾಯತು ವತಿಯಿಂದ ಫಲಾನುಭವಿಗಳಿಗೆ ಟೇಬಲ್ ಮತ್ತು ಕುರ್ಚಿ ವಿತರಣೆ

      ಮೀಂಜ ಗ್ರಾಮ ಪಂಚಾಯಿತಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಂಡ್'ನಿಂದ ಶಾಲೆಯ ಎಲ್ಲಾ ಫಲಾನುಭವಿಗಳಿಗೆ ಟೇಬಲ್ ಮತ್ತು ಕುರ್ಚಿಯ ವಿತರಣಾ ಕಾರ್ಯಕ್ರಮ ತಾ. 03-01-2020 ನೇ ಶುಕ್ರವಾರದಂದು ನಡೆಯಿತು. ಕಾರ್ಯಕ್ರಮವನ್ನು ಪಂಚಾಯತು ಅಧ್ಯಕ್ಷೆ ಶಂಶಾದ್ ಶುಕೂರ್ ಉದ್ಘಾಟಿಸಿ ಟೇಬಲ್ ಮತ್ತು ಕುರ್ಚಿಯನ್ನು ಹಸ್ತಾಂತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಕೃಷ್ಣ ಕೊಮ್ಮಂಗಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.