FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 25 January 2021

72 ನೇ ಗಣರಾಜ್ಯೋತ್ಸವ ಆಚರಣೆ

        ಭಾರತಾದ್ಯಂತ ಆಚರಿಸುತ್ತಿರುವ 72 ನೇ ಗಣರಾಜ್ಯೋತ್ಸವ ಆಚರಣೆಯ ಪ್ರಯುಕ್ತ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಕಾರ್ಯಕ್ರಮವನ್ನು ಶಾಲಾ ಮಕ್ಕಳ ಅನುಪಸ್ಥಿತಿಯಲ್ಲಿ ಸರಳವಾಗಿ ಆಚರಿಸಲಾಯಿತು.

         ಕೋವಿಡ್ ಮಾನದಂಡಗಳನ್ನು ಅನುಸರಿಸಿಕೊಂಡು ಆಚರಿಸಿದ ಈ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ವಾರ್ಡಿನ ಪ್ರಥಮ ಪ್ರಜೆಯಾದ ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿಯವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯೆಲ್, ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕುಳೂರು, ಉಪಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಹಾಗೂ ಸದಸ್ಯರಾದ ಹರಿರಾಮ ಕುಳೂರು, ರಫೀಕ್ ಪೊಯ್ಯೆಲ್ ಉಪಸ್ಥಿತರಿದ್ದರು. 'ಭಾರತದ ಅಖಂಡತೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್'ರವರ ಸಂವಿಧಾನವನ್ನು ಎತ್ತಿ ಹಿಡಿದು, ಎಲ್ಲರೂ ದೇಶವನ್ನು ಒಮ್ಮನಸ್ಸಿನಿಂದ ಮುನ್ನಡೆಸುವಂತಾಗಲಿ' ಎಂದು ಎಲ್ಲರೂ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ನೂತನವಾಗಿ ಮೀಂಜ ಪಂಚಾಯತಿಗೆ ಸದಸ್ಯರಾಗಿ ಆಯ್ಕೆಯಾದ ಶಾಲೆಯ ಇಬ್ಬರು ಹಳೆ ವಿದ್ಯಾರ್ಥಿಗಳಾದ ಜನಾರ್ಧನ ಪೂಜಾರಿ ಮತ್ತು ಬಾಬು ಸಿ ರವರಿಗೆ ಶಾಲಾ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಿಕ್ಷಕಿ ನಯನ ಎಂ ಸಹಕರಿಸಿದರು. ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮಂಗಳ ಹಾಡಲಾಯಿತು. ಬಳಿಕ ಸಿಹಿ ತಿಂಡಿ ವಿತರಿಸಲಾಯಿತು.








Thursday 7 January 2021

ಕಿಟ್ ವಿತರಣೆ

       ಮಕ್ಕಳ ಮಧ್ಯಾಹ್ನದೂಟದ ಪರವಾಗಿ ಶಾಲಾ ಮಕ್ಕಳಿಗೆ ಕಳೆದ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಇಂದು ಶಾಲೆಯಲ್ಲಿ ನಡೆಯಿತು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ಪಿ. ಟಿ. ಎ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರ ಉಪಸ್ಥಿತಿ ಯಲ್ಲಿ ಶಾಲಾ ಮಕ್ಕಳ ಹೆತ್ತವರಿಗೆ ವಿತರಿಸಲಾಯಿತು. 



ಶಾಲಾ ಪಿ. ಟಿ. ಎ ಹಾಗೂ ಕ್ಲಾಸ್ ಪಿ. ಟಿ. ಎ ಸಭೆ

          ನಮ್ಮ ಶಾಲೆಯಲ್ಲಿಂದು ರಕ್ಷಕ-ಶಿಕ್ಷಕ ಸಂಘ ಮತ್ತು ಕ್ಲಾಸ್ ಪಿ. ಟಿ. ಎ ಸಭೆಯನ್ನು ನಡೆಸಲಾಯಿತು. ರಕ್ಷಕ-ಶಿಕ್ಷಕ ಸಂಘದ ಸಭೆಯಲ್ಲಿ ಅಧ್ಯಕ್ಷತೆಯನ್ನು ಪಿ. ಟಿ. ಎ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ಆನ್ಲೈನ್ ತರಗತಿ, ಶಾಲಾ ವಾರ್ಷಿಕೋತ್ಸವ, ವಿಜ್ಞಾನೋತ್ಸವಗಳ ಕುರಿತು ಚರ್ಚೆ ನಡೆಸಲಾಯಿತು. ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ನಿರೂಪಿಸಿದರು.