FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday 15 August 2021

ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ

           ದೇಶಕ್ಕೆ ದೇಶವೇ ಸಂಭ್ರಮಿಸುವ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಈ ವರ್ಷ ಆಚರಿಸುತ್ತಿದ್ದು, ಕೊರೋನ ಕಾರಣದಿಂದ ಎಲ್ಲೆಡೆ ಸರಳವಾಗಿ ಆಚರಿಸಬೇಕಾದ ಅನಿವಾರ್ಯತೆ ಇದ್ದುದರಿಂದ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲೂ ಸರಳವಾಗಿ ಆಚರಿಸಲಾಯಿತು.

             ಬೆಳಿಗ್ಗೆ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿಯವರು  ಹಿರಿಯರು ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ಕಾಯ್ದುಕೊಂಡು ಹಸಿವು ಮುಕ್ತ ದೇಶವನ್ನು ಕಟ್ಟುವ ಕರೆಯನ್ನು ನೀಡಿದರು.  ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಉಪಾಧ್ಯಕ್ಷೆ ಯಾದ ಸುಪ್ರೀತಾ ಕುಳೂರು ಹೊಸಮನೆ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ, ಕಾರ್ಯದರ್ಶಿ ಶಶಿಕುಮಾರ್ ಕುಳೂರು, ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ನಾರಾಯಣ ನೈಕ್, ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳು, ರಕ್ಷಕ ಶಿಕ್ಷಕ ಸಂಘದ ಸದಸ್ಯರು ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯರಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇರಾದವರಿಗೆ ಬಹುಮಾನ ವಿತರಿಸಲಾಯಿತು. ಎಲ್ಲರಿಗೂ ಸಿಹಿ ತಿಂಡಿ ಹಂಚಿ, ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮ ಕೊನೆಗೊಂಡಿತು.
          ಕಳೆದ ಒಂದೂವರೆ ವರ್ಷದಿಂದ ಮಕ್ಕಳ ಕಲರವ ಇಲ್ಲದೆ ಕಳೆಗುಂದಿರುವ ಶಾಲೆಯು ಇದೀಗ ಮಕ್ಕಳ ಬರುವಿಕೆಯನ್ನು ಎದುರು ನೋಡಿಕೊಂಡು, ಮಕ್ಕಳ ಕಲಿಕೆಯನ್ನು ಆಕರ್ಷಿಸಲು ಶಾಲೆಯಲ್ಲಾದ ಇತ್ತೀಚಿನ ಬದಲಾವಣೆ ಮತ್ತು ಆನ್ಲೈನ್ ಮೂಲಕ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಮ್ಮ ಕುಳೂರು ಯೂಟ್ಯೂಬ್ ಚಾನಲಿನಲ್ಲಿ ಪ್ರಸಾರ ಮಾಡಲಾಯಿತು.