FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday 18 March 2022

ಹಳೆ ವಿದ್ಯಾರ್ಥಿ ಸಂಘ: ಶಾಲಾ ವಾರ್ಷಿಕೋತ್ಸವದ ಪೂರ್ವಬಾವಿ ಸಭೆ

        2021-22 ನೇ ಶೈಕ್ಷಣಿಕ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ನಡೆಸುವ ಬಗೆಗೆ ಇಂದು ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಪೂರ್ವಬಾವಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಯಿತು.

      ಸಭೆಯ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ ವಹಿಸಿದ್ದರು. ಶಾಲಾ ವಾರ್ಷಿಕೋತ್ಸವವನ್ನು ಮಾರ್ಚ್ ತಿಂಗಳ 31 ರಂದು ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಜೊತೆಗೆ ಈ ವರ್ಷದ ಪ್ರೀ ಪ್ರೈಮರಿ ವಿಭಾಗದ ಖರ್ಚು ವೆಚ್ಚದ ಬಗ್ಗೆ ಚರ್ಚಿಸಿ, ಈ ಮೊದಲು ನಡೆದಂತೆ ಪ್ರೀ ಪ್ರೈಮರಿ ವಿಭಾಗದ ಶಿಕ್ಷಕಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಗೌರವ ಧನ ನೀಡುವ ಬಗ್ಗೆ ಚರ್ಚಿಸಲಾಯಿತು. ಅದರಂತೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಶಿಕ್ಷಕಿಯ ಗೌರವ ಧನವನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ ಹಾಗೂ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕುಳೂರುರವರು ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಅವರಿಗೆ ಧನ್ಯವಾದವನ್ನು ಅರ್ಪಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕುಳೂರು ಸ್ವಾಗತಿಸಿ, ಸದಸ್ಯರಾದ ಜಯರಾಜ್ ಶೆಟ್ಟಿ ಚಾರ್ಲ ವಂದಿಸಿದರು.





No comments:

Post a Comment