FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 21 March 2022

ಮಕ್ಕಳ ಸಂರಕ್ಷಣೆಯ ಬಗ್ಗೆ ರಕ್ಷಕರಿಗೆ ಜಾಗೃತಿ ತರಬೇತಿ

        ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಪೀಡನೆ, ಶೋಷಣೆ ಮಕ್ಕಳ ಹಕ್ಕುಗಳನ್ನು ಕಸಿಯುತ್ತದೆ. ಈ ಸಂದರ್ಭದಲ್ಲಿ ಜನರು ಎಷ್ಟೇ ವಿದ್ಯಾವಂತರಾದರೂ ಎಳವೆಯಲ್ಲಿ ಅರಳಬೇಕಾದ ಅದೆಷ್ಟೋ ಹೂಗಳಂತಿರುವ ಮಕ್ಕಳು ಮುರುಟಿ ಬಾಡುತ್ತಿರುವ ಘಟನೆಗಳನ್ನು ಈಗಲೂ ಕೇಳುತ್ತಾ ಇದ್ದೇವೆ. ಇದನ್ನು ಸರಿಪಡಿಸಲು ಇರುವ ಒಂದು ಮಾರ್ಗವೆಂದರೆ ಜನ ಜಾಗೃತಿ.

       ಈ ನಿಟ್ಟಿನಲ್ಲಿ ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ರಕ್ಷಕರಿಗೆ ಮಕ್ಕಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ತರಬೇತಿ ನಡೆಯಿತು. ಈ ಕಾರ್ಯಕ್ರಮವನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ರಾಜಲಕ್ಷ್ಮಿ ದೇರಂಬಲ ಗುತ್ತು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತೆಯರ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಪ್ರಫುಲ್ಲ ಕುಮಾರಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು. ನಂತರ ನಡೆದ ತರಬೇತಿಯನ್ನು ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ನಡೆಸಿಕೊಟ್ಟರು.







No comments:

Post a Comment