FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Tuesday 31 May 2022

ಶಾಲಾ ಪ್ರವೇಶೋತ್ಸವಕ್ಕೆ ಸಿದ್ಧತೆ:

        2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವಕ್ಕೆ ಸಜ್ಜುಗೊಳ್ಳಲು ಸಿದ್ಧತೆ ನಡೆಸಲಾಯಿತು. ಆ ಪ್ರಯುಕ್ತ ಶಾಲಾ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಶಾಲಾ ಪರಿಸರ ಶುಚೀಕರಣ ನಡೆಸಲಾಯಿತು. ಪ್ಲಾಸ್ಟಿಕ್ ಮುಕ್ತವಾಗಿ ಶಾಲೆಯನ್ನು ಸಿಂಗರಿಸಲಾಯಿತು. ಶಾಲಾ ಶುಚೀಕರಣದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ, ಸದಸ್ಯರಾದ ಜಯರಾಜ್ ಶೆಟ್ಟಿ ಚಾರ್ಲ, ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಬಟ್ಯಪ್ಪ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಹರಿರಾಮ ಕುಳೂರು ಹಾಗೂ ಶಾಲಾ ಶಿಕ್ಷಕ ವೃಂದ ಪಾಲ್ಗೊಂಡು ಸಹಕರಿಸಿದರು.







Friday 27 May 2022

ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸಭೆ:

           2022-23 ನೇ ಸಾಲಿನ ಶಾಲಾ ಪ್ರವೇಶೋತ್ಸವವನ್ನು ನಡೆಸುವ ಸಲುವಾಗಿ ಪೂರ್ವಭಾವಿಯಾಗಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸಭೆಯನ್ನು ಕರೆಯಲಾಯಿತು. ಸಭೆಯ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ಪ್ರವೇಶೋತ್ಸವದಂದು ಮಾಡಲುದ್ದೇಶಿಸಿದ ಕಾರ್ಯಕ್ರಮಗಳ ವಿವರ ನೀಡಿದರು. ಪ್ರೀ ಪ್ರೈಮರಿಯ ಜವಾಬ್ದಾರಿ ಹೊತ್ತಿರುವ ಹಳೆ ವಿದ್ಯಾರ್ಥಿ ಸಂಘವು, ಈ ವರ್ಷದ ಪ್ರೀ ಪ್ರೈಮರಿಯ ನವಾಗತ ಮಕ್ಕಳಿಗೆ ಸಮವಸ್ತ್ರ, ಬ್ಯಾಗ್ ಹಾಗೂ ಪಾಠ ಪುಸ್ತಕಗಳನ್ನು ಕೊಡುಗೆ ರೂಪದಲ್ಲಿ ನೀಡುವ ಬಗ್ಗೆ ತೀರ್ಮಾನಿಸಲಾಯಿತು. ಇಲ್ಲಿವರೆಗಿನ ಲೆಕ್ಕ ಪತ್ರವನ್ನು ಮಂಡಿಸಲಾಯಿತು.

          ಮುಂದಿನ ಶೈಕ್ಷಣಿಕ ವರ್ಷದ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಸಮಿತಿ ರೂಪಿಕರಣಕ್ಕೆ ಜೂನ್ 19 ರಂದು ಅಪರಾಹ್ನ 2 ಗಂಟೆಗೆ ದಿನ ನಿಗದಿ ಪಡಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕುಳೂರು ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.






Wednesday 25 May 2022

ಶಾಲಾ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ ಸಭೆ:

         2022-23 ನೇ ಶೈಕ್ಷಣಿಕ ವರ್ಷದ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಜೂನ್ ಒಂದರಂದು ನಡೆಸುವ ಶಾಲಾ ಪ್ರವೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ರಕ್ಷಕ ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಯಿತು. ಸಭೆಯ ಅಧ್ಯಕ್ಷತೆಯನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ನಡೆಸಲುದ್ದೇಶಿಸಿದ ಕಾರ್ಯಕ್ರಮಗಳ ವಿವರ ನೀಡಿದರು. ಒಂದನೇ ತರಗತಿಗೆ ದಾಖಲಾದ ನವಾಗತ ಮಕ್ಕಳಿಗೆ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಬ್ಯಾಗ್ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಮೇ 30 ರಂದು ಶಾಲಾ ಪರಿಸರ ಶುಚೀಕರಣ ಮಾಡುವುದೆಂದು ತೀರ್ಮಾನಿಸಲಾಯಿತು. ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕ ಜಯ ಪ್ರಶಾಂತ್ ಪಾಲೆಂಗ್ರಿ ವಂದಿಸಿದರು.