FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 14 November 2022

ವಾಚನಾ ಮಿತ್ರತ್ವ ; ರಕ್ಷಕರಿಂದ ವಿವಿಧ ಚಟುವಟಿಕೆ

            ಶಾಲಾ ಮಕ್ಕಳಲ್ಲಿ ಪುಸ್ತಕ ಓದಿನ ಕಡೆಗೆ ಒಲವು ಮೂಡಿಸುವ ಉದ್ದೇಶದಿಂದ ವಾಚನಾ ಮಿತ್ರತ್ವ ಎಂಬ ಶಾಲಾ ಮಟ್ಟದ ವಿನೂತನ ಕಾರ್ಯಕ್ರಮವು ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

           ಕಾರ್ಯಕ್ರಮದಲ್ಲಿ ಮಕ್ಕಳ ಜೊತೆಗೆ ರಕ್ಷಕರಿಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಆಯಾ ತರಗತಿಯ ಚಟುವಟಿಕೆಗಳನ್ನು ಮಕ್ಕಳು ಪ್ರದರ್ಶಿಸಿದರು. ನಂತರ ರಕ್ಷಕರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶವನ್ನು ನೀಡಲಾಯಿತು. ರಕ್ಷಕರು ವಿವಿಧ ರೀತಿಯ ಸಾಹಿತ್ಯಿಕ ಕೃತಿಗಳನ್ನು ರಚಿಸಿ ಪ್ರದರ್ಶಿಸಿದರು.

           ರಕ್ಷಕರ ಉತ್ಪನ್ನಗಳನ್ನು ಹಸ್ತ ಪತ್ರಿಕೆ ಮಾಡಲಾಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಪೊಯ್ಯೆಲ್ ರವರು 'ಸೃಷ್ಟಿ' ಹಸ್ತ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುನಿತಾ ಕುಳೂರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಸಿಬ್ಬಂದಿ ವಿನೋದ್ ಕುಮಾರ್ ರವರು ತಾವು ತಂದಿದ್ದ ಫ್ಯಾಷನ್ ಫ್ರೂಟ್ ಗಿಡಗಳನ್ನು ಎಲ್ಲಾ ಮಕ್ಕಳಿಗೆ ನೀಡಿ ಗಮನ ಸೆಳೆದರು. ಶಾಲಾ ಶಿಕ್ಷಕಿ ನಯನ ಎಂ ಸ್ವಾಗತಿಸಿ, ಶಿಕ್ಷಕಿ ಚೇತನ ವಂದಿಸಿದರು. ಶಿಕ್ಷಕಿ ಸೌಮ್ಯ ಪಿ ಕಾರ್ಯಕ್ರಮ ನಡೆಸಿಕೊಟ್ಟರು.

 





















No comments:

Post a Comment