FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 20 March 2023

ನಾಲ್ಕನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭ:

        ಕುಳೂರು ಶಾಲೆಯ ನಾಲ್ಕನೇ ತರಗತಿಯ ಮಕ್ಕಳ ಬೀಳ್ಕೊಡುಗೆ ಸಮಾರಂಭ ನಡೆಯಿತು. 

       ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ಪಿ ರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ಶಿಕ್ಷಕಿ ಸೌಮ್ಯ ಪಿ ವಹಿಸಿದ್ದರು. ಶಾಲಾ ಶಿಕ್ಷಕರಾದ ಜಯಪ್ರಶಾಂತ್ ಪಾಲೆಂಗ್ರಿ, ನಯನ ಎಂ, ಅಶ್ವಿನಿ ಎಂ ಹಾಗೂ ಚೇತನ ಉಪಸ್ಥಿತರಿದ್ದರು.

       ಮಕ್ಕಳು ಹಾಗೂ ರಕ್ಷಕರು ಶಾಲಾ ದಿನಗಳ ಬಗ್ಗೆ ಮೆಲುಕು ಹಾಕಿ, ಭಾವುಕರಾದರು. ಮಕ್ಕಳ ಜೊತೆ ರಕ್ಷಕರೂ ಶಾಲೆಯನ್ನು ಬಿಟ್ಟು ಹೋಗಲು ಮನಸ್ಸಾಗದಿರುವುದು ಅವರ ಕಣ್ಣಂಚಿನಲ್ಲಿ ಮೂಡಿದ ಕಣ್ಣೀರು ಸಾಕ್ಷಿಯಾಯಿತು. ವಿದ್ಯಾರ್ಥಿಗಳಾದ ಜೀಯ ಜೆ ಶೆಟ್ಟಿ, ಸಾನ್ವಿಕ, ಲಿಪಿಕ ಪಿ, ರಕ್ಷಕರಾದ ಜಯರಾಜ್ ಶೆಟ್ಟಿ ಚಾರ್ಲ, ಉದಯ ಕುಮಾರಿ, ಸುಹಾಸಿನಿ ಮೊದಲಾದವರು ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಮಕ್ಕಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.

ವಿದ್ಯಾರ್ಥಿನಿ ಕುಮಾರಿ ಸಾನ್ವಿಕ ಸ್ವಾಗತಿಸಿ, ವಿದ್ಯಾರ್ಥಿನಿ ಕುಮಾರಿ ಜೀಯ ಜೆ ಶೆಟ್ಟಿ ವಂದಿಸಿದಳು.












ಕಲಿಕೋತ್ಸವ 2022-23

        ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಿಕಾ ಪ್ರದರ್ಶನ ಕಾರ್ಯಕ್ರಮವಾಗಿ ಕಲಿಕೋತ್ಸವ 2022-23 ನಡೆಯಿತು.

Sunday 19 March 2023

ಶತಮಾನೋತ್ಸವದ ಪ್ರಯುಕ್ತ ಊರವರ ಕ್ರೀಡಾಕೂಟ:

      ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವದ ಸಂಭ್ರಮದಲ್ಲಿದ್ದು ಆ ಪ್ರಯುಕ್ತ ಊರ ಕ್ರೀಡಾಭಿಮಾನಿಗಳಿಗೆ ಕ್ರೀಡಾಕೂಟ ನಡೆಯಿತು. 

      ಕ್ರೀಡಾಕೂಟವನ್ನು ಕುಳೂರು ಶಾಲಾ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸಿದರು. ಜೊತೆಗೆ ಮಾದಕವಸ್ತು ಮುಕ್ತ ಕೇರಳ ಅಭಿಯಾನದ ಅಂಗವಾಗಿ ನಡೆಸಿದ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು. ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು, ಕುಳೂರು ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ, ಸ್ವಾಗತ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯೇಲ್, ಕ್ರೀಡಾ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಸಿ ಚಿನಾಲ, ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ಪಿ, ಡಾ. ಕೃಷ್ಣ ಭಟ್ ಚಿಗುರುಪಾದೆ ಉಪಸ್ಥಿತರಿದ್ದರು.

       ಬಳಿಕ ಕುಳೂರು ಶಾಲಾ ವಠಾರದಲ್ಲಿ ವಿವಿಧ ಆಟೋಟ, ಮನೋರಂಜನಾ ಸ್ಪರ್ಧೆಗಳು ನಡೆದವು. ಕುಳೂರು ಶಾಲಾ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಶತಮಾನೋತ್ಸವ ಕಟ್ಟಡ ಸಮಿತಿಯ ಅಧ್ಯಕ್ಷ ಸತೀಶ್ ಎಲಿಯಾಣ, ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ವೇದಿಕೆ ಸಮಿತಿಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಪೊಯ್ಯೇಲ್, ಕ್ರೀಡಾ ಸಮಿತಿಯ ಕಾರ್ಯದರ್ಶಿ ರಫೀಕ್ ಪೊಯ್ಯೇಲ್, ಹಣಕಾಸು ಸಮಿತಿಯ ಕಾರ್ಯದರ್ಶಿ ಸುಧಾಕರ ಶೆಟ್ಟಿ ಎಲಿಯಾಣ, ಪ್ರಚಾರ ಸಮಿತಿಯ ಅಧ್ಯಕ್ಷ ವಸಂತ ಪೂಜಾರಿ ಕುಳೂರು, ಆಹಾರ ಸಮಿತಿಯ ಕಾರ್ಯದರ್ಶಿ ರಾಜೇಶ್ ಸೇನವ  ನಾರ್ಣಹಿತ್ಲು, ಸ್ವಾಗತ ಸಮಿತಿಯ ಕಾರ್ಯದರ್ಶಿ ಪ್ರೇಮ ಜಿ ಶೆಟ್ಟಿ ಹಾಗೂ ಶಾಲಾ ಶಿಕ್ಷಕ ವೃಂದ ನೇತೃತ್ವ ನೀಡಿದರು.