FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 26 June 2023

ವಾಚನ ವಾರಾಚರಣೆಯ ಸಮಾರೋಪ ಸಮಾರಂಭ; ಮಕ್ಕಳ ಬಾಲಸಭೆ ಉದ್ಘಾಟನೆ; ಕತೋತ್ಸವಕ್ಕೆ ಚಾಲನೆ:

         ಮಕ್ಕಳಲ್ಲಿ ಪುಸ್ತಕ ಓದುವಿಕೆಯ ಆಸಕ್ತಿಯನ್ನು ಮೂಡಿಸಲು ವಿವಿಧ ಚಟುವಟಿಕೆಗಳನ್ನು ವಾಚನ ವಾರಾಚರಣೆಯೆಂಬ ಕಾರ್ಯಕ್ರಮದಲ್ಲಿ ಅಳವಡಿಸಿ ಪುಸ್ತಕ ಓದಿನ ಮಹತ್ವದ ಅರಿವನ್ನು ಮೂಡಿಸಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನಲ್ಲಿ ವಾಚನ ವಾರಾಚರಣೆ ನಡೆಸಲಾಯಿತು. ಇದರ ಸಮಾರೋಪ ಸಮಾರಂಭ ಹಾಗೂ ಮಕ್ಕಳ ಬಾಲಸಭೆಯ ಉದ್ಘಾಟನೆಯು ಇಂದು ನಡೆಯಿತು.

        ಕಾರ್ಯಕ್ರಮವನ್ನು ಹವ್ಯಾಸಿ ಬರಹಗಾರ, ಎಸ್. ಎ. ಟಿ. ಪ್ರೌಢ ಶಾಲೆಯ ಶಿಕ್ಷಕ ಶ್ರೀ ಜಯಪ್ರಕಾಶ್ ಶೆಟ್ಟಿ ಅಂಗಡಿದಾರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪಕ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಸುಧಾಕರ್ ಶೆಟ್ಟಿ ಎಲಿಯಾಣ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಂಜೇಶ್ವರ ಬಿ. ಆರ್. ಸಿ ಯ ಸಿ. ಆರ್. ಸಿ ಕೋರ್ಡಿನೇಟರ್ ಶ್ರೀಮತಿ ಮೀನಾಕ್ಷಿ ಬೊಡ್ಡೋಡಿ, ಶಾಲಾ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಚರಿತ ಚಿನಾಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಚೈತ್ರ ಕಲ್ಕಾರ್ ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸೌಮ್ಯ ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು.

         ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ರಚಿತವಾದ 'ಮಿನುಗು' ಎಂಬ ಹಸ್ತಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಜೊತೆಗೆ ವಾಚನ ವಾರಾಚರಣೆಯ ಅಂಗವಾಗಿ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

        ಶಾಲಾ ಮಕ್ಕಳ ಓದುವಿಕೆ ಹಾಗೂ ಬರವಣಿಗೆಯನ್ನು ಪ್ರೋತ್ಸಾಹಿಸಲು 'ಕತೋತ್ಸವ' ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

       ಶಾಲಾ ಶಿಕ್ಷಕಿ ಶ್ರೀಮತಿ ಅಶ್ವಿನಿ ಎಂ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಶ್ವೇತ ಇ ವಂದಿಸಿದರು. ಶಿಕ್ಷಕಿ ಶ್ರೀಮತಿ ನಯನ ಎಂ ಕಾರ್ಯಕ್ರಮ ನಿರೂಪಿಸಿದರು. 

















No comments:

Post a Comment