FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday 26 January 2024

75 ನೇ ಗಣರಾಜ್ಯೋತ್ಸವ ಆಚರಣೆ:

        ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 75 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

        ಇದರಂಗವಾಗಿ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀ ಸತೀಶ್ ಎಲಿಯಾಣ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ವಾರ್ಡ್ ಸದಸ್ಯ ಶ್ರೀ ಜನಾರ್ಧನ ಪೂಜಾರಿಯವರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಭಾರತೀಯರನ್ನು ಸಮಾನತೆಯಿಂದ ಕಾಣುವಂತಾಗಲು ಕಾರಣರಾದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ರವರನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಶತಮಾನೋತ್ಸವ ಅತಿಥಿ ಸತ್ಕಾರ ಸಮಿತಿ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲ್, ಕಾರ್ಯಕ್ರಮ ಸಮಿತಿ ಅಧ್ಯಕ್ಷರಾದ ಶ್ರೀ ಹರಿರಾಮ ಕುಳೂರು, ಆಹಾರ ಸಮಿತಿ ಅಧ್ಯಕ್ಷರಾದ ಶ್ರೀ ರಘುರಾಮ ಶೆಟ್ಟಿ ಎಲಿಯಾಣ, ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಕಾರ್ಯದರ್ಶಿ ಶ್ರೀ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಉಪಸ್ಥಿತರಿದ್ದು ಶುಭ ಕೋರಿದರು. ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಕುಮಾರಿ ಭಾಗ್ಯಲಕ್ಷ್ಮಿ ಪಿ ರವರು ಹಾಡಿದ ದೇಶಭಕ್ತಿ ಗೀತೆ ಎಲ್ಲರ ಮನಗೆದ್ದಿತು. ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಶ್ವೇತ ವಂದಿಸಿದರು. ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಿಹಿತಿಂಡಿ ವಿತರಿಸಲಾಯಿತು.







No comments:

Post a Comment