FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday 7 March 2024

ಶಾಲಾ ಮಟ್ಟದ ಮಕ್ಕಳ ಕಲಿಕೋತ್ಸವ :

        ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24 ನೇ ಸಾಲಿನ ಶಾಲಾ ಮಟ್ಟದ ಕಲಿಕೋತ್ಸವ ಕಾರ್ಯಕ್ರಮ ನಡೆಯಿತು. 

       ಕಾರ್ಯಕ್ರಮವನ್ನು ವಾರ್ಡ್ ಸದಸ್ಯ ಶ್ರೀ ಜನಾರ್ಧನ ಪೂಜಾರಿ ಕುಳೂರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ ವಹಿಸಿದ್ದರು‌. ಮುಖ್ಯ ಅತಿಥಿಯಾಗಿ ಮಂಜೇಶ್ವರ ಬಿ.ಆರ್.ಸಿ. ಯ ಸಿ.ಆರ್.ಸಿ. ಕೋರ್ಡಿನೇಟರ್ ಶ್ರೀಮತಿ ಮೋಹಿನಿ ಆಗಮಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಚರಿತ ಚಿನಾಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಚೈತ್ರ ಕಲ್ಕಾರ್ ಉಪಸ್ಥಿತರಿದ್ದರು.

      ಶಾಲಾ ಶಿಕ್ಷಕಿ ಕುಮಾರಿ ಭಾಗ್ಯಲಕ್ಷ್ಮಿ ಪಿ ಕಲಿಕೋತ್ಸವ ಗೀತೆಯನ್ನು ಹಾಡಿದರು. ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಶಾಲಾ ಹಿರಿಮೆ ವರದಿಯನ್ನು ಮಂಡಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಶ್ವೇತ ಇ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಅಶ್ವಿನಿ ಎಂ ವಂದಿಸಿದರು. ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಕಾರ್ಯಕ್ರಮ ನಿರೂಪಿಸಿದರು. 

     ಬಳಿಕ ಶಾಲಾ ಮಕ್ಕಳಿಂದ ವಿವಿಧ ಕಲಿಕಾ ಪ್ರದರ್ಶನವು ನಡೆಯಿತು.
























No comments:

Post a Comment