FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday, 20 March 2024

ಕರಾಟೆ ತರಬೇತಿಯ ಉದ್ಘಾಟನೆ:

     ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ವ ಶಿಕ್ಷಾ ಕೇರಳ ಹಾಗೂ ಬಿ.ಆರ್.ಸಿ. ಮಂಜೇಶ್ವರದ ವತಿಯಿಂದ ಶಾಲೆಯ ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿಯ ಉದ್ಘಾಟನಾ ಸಮಾರಂಭ ನಡೆಯಿತು. 

    ಕಾರ್ಯಕ್ರಮವನ್ನು ಬಿ.ಆರ್.ಸಿ. ಮಂಜೇಶ್ವರದ ಸಿ.ಆರ್.ಸಿ.‌ ಕೋರ್ಡಿನೇಟರ್ ಶ್ರೀಮತಿ ಮೋಹಿನಿ‌ರವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕರಾಟೆ ತರಬೇತುದಾರರಾದ ಶ್ರೀ ಸನತ್ ಮಂಜುನಾಥ್ ವೈ ಆಗಮಿಸಿದ್ದರು. ಶತಮಾನೋತ್ಸವ ಕಾರ್ಯಕ್ರಮ ಸಮಿತಿ ಅಧ್ಯಕ್ಷರಾದ ಶ್ರೀ ಹರಿರಾಮ ಕುಳೂರು, ಜತೆ ಕಾರ್ಯದರ್ಶಿಯಾದ ಶ್ರೀ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಮಾತೃ ಪಿ.ಟಿ.ಎ. ಅಧ್ಯಕ್ಷೆ ಶ್ರೀಮತಿ ಸುಚರಿತ ಚಿನಾಲ ಉಪಸ್ಥಿತರಿದ್ದರು.

       ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕಿ ಕುಮಾರಿ ಭಾಗ್ಯಲಕ್ಷ್ಮಿ ಪಿ ವಂದಿಸಿದರು. ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.












No comments:

Post a Comment