FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday 15 August 2024

ಕುಳೂರು ಶಾಲೆಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ ; ಸಾಧಕರಿಗೆ ಸನ್ಮಾನ :

       ದೇಶದಾದ್ಯಂತ ಆಚರಿಸುವ 78 ನೇ ಸ್ವಾತಂತ್ರ್ಯೋತ್ಸವವನ್ನು ಕುಳೂರಿನ‌ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. 

      ಆ ಪ್ರಯುಕ್ತ ಶಾಲಾ ಮಕ್ಕಳಿಂದ ನಡೆದ ಆಕರ್ಷಕ ಮೆರವಣಿಗೆಗೆ ನಿವೃತ್ತ ಸೇನಾಧಿಕಾರಿ ಶ್ರೀ ಸೀತಾರಾಮ ಶೆಟ್ಟಿ ಎಲಿಯಾಣ ರವರು ಚಾಲನೆಯಿತ್ತರು. ಬಳಿಕ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ನೆರವೇರಿಸಿದರು.

      ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ರವರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರು, ನಿವೃತ್ತ ಸೇನಾಧಿಕಾರಿ ಶ್ರೀ ಸೀತಾರಾಮ ಶೆಟ್ಟಿ ಎಲಿಯಾಣ, ನಿವೃತ್ತ ಕುಳೂರು ಶಾಲಾ ಶಿಕ್ಷಕರಾದ ಶ್ರೀ ಶ್ಯಾಮ್ ಭಟ್ ಆಗಮಿಸಿ ಸ್ವಾತಂತ್ರ್ಯೋತ್ಸವಕ್ಕೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಉಪಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಶಾಲಾಭಿವೃದ್ಧಿ ಸಮಿತಿ‌ ಸದಸ್ಯರಾದ ಶ್ರೀ ನಾರಾಯಣ ನೈಕ್‌ ನಡುಹಿತ್ಲು, ಯುವ ಉದ್ಯಮಿ ಶ್ರೀ ಮೋಹನ್ ಶೆಟ್ಟಿ ಮಜ್ಜಾರ್, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಆಚಾರ್ಯ ಆದರ್ಶ ನಗರ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಅನುಪಮ ಉಪಸ್ಠಿತರಿದ್ದು ಶುಭ ಹಾರೈಸಿದರು. ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ, ಶಶಿಕುಮಾರ್ ಕುಳೂರು ಶುಭಾಶಯ ಕೋರಿದರು.

         ಇದೇ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಯೂ, ಸುಧೀರ್ಘ 31 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಹಲವಾರು ಪದಕಗಳನ್ನು ಪಡೆದ ನಿವೃತ್ತ ಸೇನಾಧಿಕಾರಿಯೂ ಆಗಿರುವ ಶ್ರೀ ಸೀತಾರಾಮ ಶೆಟ್ಟಿ ಎಲಿಯಾಣ ಹಾಗೂ ಕುಳೂರು ಶಾಲೆಯಲ್ಲಿ‌ ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಶ್ರೀ ಶ್ಯಾಮ್ ಭಟ್ ರವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಾರ್ಪಣೆ ಮಾಡಲಾಯಿತು. ಶಾಲೆಯಲ್ಲಿ ಹಲವಾರು ವರ್ಷಗಳಿಂದ ಅಡುಗೆ ಕೆಲಸ ಮಾಡಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಜಲಜ ಪೊಯ್ಯೇಲು ರವರನ್ನು ಶತಮಾನೋತ್ಸವದ ಪರವಾಗಿ ಗೌರವಿಸಲಾಯಿತು. ಬಳಿಕ ಶಾಲಾ ಶಿಕ್ಷಕಿ ಶ್ರೀಮತಿ ಅಶ್ವಿನಿ ಎಂ ರವರು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಬಹುಮಾನದ ಪ್ರಾಯೋಜಕತ್ವವನ್ನು ಜಯರಾಜ್ ಶೆಟ್ಟಿ ಚಾರ್ಲ ಹಾಗೂ ಮೊಹಮ್ಮದ್ ಹಾಜಿ ಕಂಚಿಲ‌ ವಹಿಸಿದ್ದರು. 

     ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಶ್ವೇತ ಇ ವಂದಿಸಿದರು. ಶಾಲಾ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು. ಎಲ್ಲರಿಗೂ ಸಿಹಿ ತಿಂಡಿ ವಿತರಣೆ ಮಾಡಲಾಯಿತು. 

      ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.





















































No comments:

Post a Comment