FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday, 13 September 2024

ಕುಳೂರು ಶಾಲೆಯಲ್ಲಿ ಸಂಭ್ರಮದ ಓಣಂ ಆಚರಣೆ :

        ಕುಳೂರಿನ‌ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇರಳದ ನಾಡ ಹಬ್ಬವಾದ ಓಣಂ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

       ಕಾರ್ಯಕ್ರಮವನ್ನು ನಿವೃತ್ತ ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ‌ಸತ್ಯನಾರಾಯಣ ಶರ್ಮ ಪಿ ರವರು ದೀಪ ಬೆಳಗಿಸಿ ಚಾಲನೆಯಿತ್ತರು. ಜೊತೆಗೆ ಓಣಂ ಆಚರಣೆಯ ಹಿನ್ನೆಲೆಯನ್ನು ಮಕ್ಕಳಿಗೆ ತಿಳಿಸಿದರು. ಮಕ್ಕಳು ಹೂವಿನ ರಂಗೋಲಿಯನ್ನು ಬಿಡಿಸಿ ಸಂಭ್ರಮಿಸಿದರು. 

      ಮಧ್ಯಾಹ್ನ ಓಣಂ ವಿಶೇಷ ಊಟವನ್ನು ಸವಿಯಲಾಯಿತು. ಬಳಿಕ ಶಾಲಾ ಮಕ್ಕಳಿಗೆ, ಶಿಕ್ಷಕ ವೃಂದಕ್ಕೆ ಹಾಗೂ ಹೆತ್ತವರಿಗೆ ಮನರಂಜನಾ ಆಟವನ್ನು ಆಡಲಾಯಿತು.

       ಶಾಲಾ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಸದಸ್ಯರಾದ ಶ್ರೀ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಅನುಪಮ ಚಿನಾಲ ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವೃಂದ ಕಾರ್ಯಕ್ರಮವನ್ನು ಸಂಘಟಿಸಿದರು.























No comments:

Post a Comment