ಕಳೆದ ವರ್ಷ ಶತಮಾನೋತ್ಸವವನ್ನು ಆಚರಿಸಿ ಇದೀಗ 101 ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಕುಳೂರು ಶಾಲೆಯಲ್ಲಿ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ವಾರ್ಷಿಕೋತ್ಸವಕ್ಕೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲರವರು ಧ್ವಜಾರೋಹಣಗೈಯುವ ಮೂಲಕ ಚಾಲನೆ ನೀಡಿದರು. ಬಳಿಕ ಶಾಲಾ ಮಕ್ಕಳಿಗೆ ಮನೋರಂಜನಾ ಆಟಗಳನ್ನು ಏರ್ಪಡಿಸಲಾಯಿತು.ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಮೀಂಜ ಪಂಚಾಯತಿನ ಅಧ್ಯಕ್ಷೆ ಶ್ರೀಮತಿ ಸುಂದರಿ ಆರ್ ಶೆಟ್ಟಿಯವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲರವರು ವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮೀಂಜ ಪಂಚಾಯತಿನ ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ಸರಸ್ವತಿ ಕೆ, ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರು ಹಾಗೂ ಮೀಂಜ ಪಿ.ಇ.ಸಿ. ಸೆಕ್ರಟರಿ ಹಾಗೂ ಮಜಿಬೈಲು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಸುರೇಶ್ ಬಂಗೇರ ಆಗಮಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಈ ವರ್ಷ ಸೇವೆಯಿಂದ ನಿವೃತ್ತರಾಗುತ್ತಿರುವ ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ಶ್ರೀ ದಿನೇಶ್ ವಿ ಹಾಗೂ ಮಂಜೇಶ್ವರ ಉಪಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಶ್ರೀ ರಾಜಗೋಪಾಲ ಎನ್ ರವರಿಗೆ ಶಾಲಾ ಪರವಾಗಿ ಗೌರವಾರ್ಪಣೆ ನೀಡಲಾಯಿತು. ಜೊತೆಗೆ ಭಾರತದ ಥ್ರೋಬಾಲ್ ತಂಡಕ್ಕೆ ಆಯ್ಕೆಯಾಗಿ ಇಂಡೋ-ನೇಪಾಳ ಚಾಂಪಿಯನ್ ಶಿಪ್ ನಲ್ಲಿ ಆಡಿ ಗೆದ್ದಂತಹ ಅಂತರಾಷ್ಟ್ರೀಯ ಥ್ರೋಬಾಲ್ ಪಟು, ಕುಳೂರು ಶಾಲಾ ಹಳೆ ವಿದ್ಯಾರ್ಥಿ ಶ್ರೀ ಬಸವರಾಜ್ ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಆದರ್ಶನಗರ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀ ನಾರಾಯಣ ನೈಕ್ ನಡುಹಿತ್ಲು, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಶ್ರೀ ಸುಧಾಕರ ಶೆಟ್ಟಿ ಎಲಿಯಾಣ ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಅನುಪಮ ಚಿನಾಲ ಉಪಸ್ಥಿತರಿದ್ದರು.
ಶಾಲಾ ಹಳೆ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ಶ್ರೀ ಶೇಖ್ ಅಬ್ದುಲ್ ಮಜೀದ್ ಚಾರ್ಲ ರವರು ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸೌಮ್ಯ ಪಿ. ವಂದಿಸಿದರು. ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
ಬಳಿಕ ಶಾಲಾ ಮಕ್ಕಳು, ಸ್ಥಳೀಯ ಅಂಗನವಾಡಿ ಪುಟಾಣಿಗಳು ಹಾಗೂ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಲಾ ಮಕ್ಕಳಿಂದ ಕಿರು ನಾಟಕ ಪ್ರದರ್ಶನವು ನಡೆಯಿತು.
ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದ ಸಹಕರಿಸಿದರು.
No comments:
Post a Comment