ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನಾ ವಾರಾಚರಣೆಯ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲರವರು ಶಾಲಾ ಮಕ್ಕಳ ಹಸ್ತಪತ್ರಿಕೆಯಾದ 'ಸಿಂಚನ'ವನ್ನು ಬಿಡುಗಡೆಗೊಳಿಸಿದರು.ಇದೇ ಸಂದರ್ಭದಲ್ಲಿ ವಾರಾಚರಣೆಯ ಅಂಗವಾಗಿ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಸೌಮ್ಯ ಪಿ. ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ಎಂ ವಂದಿಸಿದರು. ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ನಿರೂಪಿಸಿದರು.
No comments:
Post a Comment