ಭಾರತದ ಪ್ರಮುಖ ರಾಷ್ಟ್ರೀಯ ಆಚರಣೆಯಾದ 79 ನೇ ಸ್ವಾತಂತ್ರ್ಯೋತ್ಸವವವನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮಕ್ಕಳಿಂದ ಆಕರ್ಷಕ ಮೆರವಣಿಗೆ ನಡೆಯಿತು. ಬಳಿಕ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ನೆರವೇರಿಸಿದರು.ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರು ಆಗಮಿಸಿ ಶುಭ ಕೋರಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಕವಿತಾ ದೇರಂಬಳ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಪ್ರಿಯಾಂಕ ಕೇಮಜಲ್, ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಶ್ರೀ ರಘುರಾಮ ಶೆಟ್ಟಿ ಎಲಿಯಾಣ ಉಪಸ್ಥಿತರಿದ್ದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವ ದ ಪ್ರಯುಕ್ತ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಇದನ್ನು ಶಾಲಾ ಶಿಕ್ಷಕಿ ಶ್ರೀಮತಿ ಅಶ್ವಿನಿ ಎಂ. ನಡೆಸಿಕೊಟ್ಟರು.
ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ನಯನ ಎಂ. ವಂದಿಸಿದರು. ಶಾಲಾ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಲಘು ಉಪಾಹಾರ ಹಾಗೂ ಸಿಹಿತಿಂಡಿಯನ್ನು ವಿತರಿಸಲಾಯಿತು.
No comments:
Post a Comment