FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Tuesday, 26 August 2025

ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶ್ರೀ ವಿನೋದ್ ಕುಮಾರ್ ಸರ್ ರವರಿಂದ‌ ಶಾಲಾ ಮಕ್ಕಳಿಗೆ ವಿಶೇಷ ಭೋಜನ :

          ಇಂದು ನಮ್ಮ ಶಾಲೆಗೆ ಮಧೂರಿನ ಜಿ.ಎಸ್.ಬಿ.ಎಸ್. ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ವಿನೋದ್ ಕುಮಾರ್ ಸರ್ ರವರು ಆಗಮಿಸಿ ಶಾಲಾ ಮಕ್ಕಳಿಗೆ ಹಾಗೂ ಪಿ.ಟಿ.ಎ. ಮತ್ತು ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯವರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಿದರು.

         ಶ್ರೀಯುತರು ನಮ್ಮ ಕುಳೂರು ಶಾಲೆಯ ಇತ್ತೀಚೆಗಿನ ಅಭಿವೃದ್ಧಿ ಕಾರ್ಯಗಳಿಗೆ ಮುನ್ನುಡಿ ಬರೆದವರೆಂದೇ ಹೇಳಬಹುದು. ಎಂಟು ವರ್ಷಗಳ ಹಿಂದೆ ಮುಖ್ಯ ಶಿಕ್ಷಕರಾಗಿ ಭಡ್ತಿ ಪಡೆದು ಕುಳೂರು ಶಾಲೆಯಲ್ಲಿ ಸೇವೆ ಸಲ್ಲಿಸಿದ ಶ್ರೀ ವಿನೋದ್ ಕುಮಾರ್ ಸರ್ ರವರು ಎಲ್ಲರಿಗೂ ಮಾದರಿ ಶಿಕ್ಷಕರಾಗಿ ಗುರುತಿಸಿಕೊಂಡವರಾಗಿದ್ದಾರೆ. ಅವರು ಈ ಶೈಕ್ಷಣಿಕ ವರ್ಷದಲ್ಲಿ ನಿವೃತ್ತಿಯನ್ನು ಪಡೆಯಲಿದ್ದು ತಾವು ಸೇವೆ ಸಲ್ಲಿಸಿದ ಕುಳೂರು ಶಾಲೆಯ ಮಕ್ಕಳಿಗೆ ಇಂದು ವಿಶೇಷ ಮಧ್ಯಾಹ್ನದೂಟ ನೀಡಿ ಗಮನ ಸೆಳೆದರು. ಶಾಲಾ ವ್ಯವಸ್ಥಾಪನಾ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿಯ ಸಕ್ರಿಯ ಸದಸ್ಯರಾದ ಶ್ರೀ ನಾರಾಯಣ ನೈಕ್ ನಡುಹಿತ್ಲು ರವರು ಅವರಿಗೆ ಶಾಲು ಹೊದಿಸಿ ಗೌರವಿಸಿದರು.

        ಶ್ರೀ ವಿನೋದ್ ಕುಮಾರ್ ಸರ್ ರವರಿಗೆ ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವೃಂದ, ಶಾಲಾ ವ್ಯವಸ್ಥಾಪನಾ ಸಮಿತಿ, ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿಯ ಪರವಾಗಿ ಅನಂತಾನಂತ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇವೆ. 

















No comments:

Post a Comment