2025-26 ನೇ ಸಾಲಿನ ಶಾಲಾ ಮಟ್ಟದ ಕ್ರೀಡಾಕೂಟವು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ, ಶಾಲಾ ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ ಉಪಸ್ಥಿತರಿದ್ದು ಶುಭ ಹಾರೈಸಿದರು.ಬಳಿಕ ವಿವಿಧ ವಿಭಾಗಗಳಲ್ಲಿ ಕ್ರೀಡಾಕೂಟವು ನಡೆಯಿತು. ಮಕ್ಕಳು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದರು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಕ್ರೀಡಾಕೂಟವನ್ನು ಸಂಘಟಿಸಿದರು.
No comments:
Post a Comment