ರಾಷ್ಟ್ರ ಕಂಡ ಮಹಾನ್ ವ್ಯಕ್ತಿಗಳಾದ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮದಿನಾಚರಣೆಯನ್ನು ಸೇವನಾ ದಿನಾಚರಣೆಯನ್ನಾಗಿ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿಯವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲರವರು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾತೃ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಉಷಾ ಆದರ್ಶನಗರ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಪ್ರಿಯಾಂಕ ಕೇಮಜಲ್, ಶಾಲಾ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀಮತಿ ವಿದ್ಯಾ ಕಾಯರ್ ತೊಟ್ಟಿ, ಶ್ವೇತ ಕೇಮಜಲ್ ಉಪಸ್ಥಿತರಿದ್ದರು.ಶಾಲಾ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ನಯನ ಎಂ ವಂದಿಸಿದರು.
ಬಳಿಕ ಶಾಲಾ ಪರಿಸರ ಶುಚೀಕರಣ ನಡೆಯಿತು. ಶಾಲಾ ಶಿಕ್ಷಕ ವೃಂದ, ಶಾಲಾ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ, ಸದಸ್ಯರಾದ ಶ್ರೀಮತಿ ಉದಯಕುಮಾರಿ ಕುಳೂರು, ಭಾರತಿ ಕುಳೂರು, ಜಲಜ ಕುಳೂರು ಹಾಗೂ ಮಕ್ಕಳು ಜೊತೆ ಸೇರಿ ಸಹಕರಿಸಿದರು. ಇದೇ ಸಂದರ್ಭದಲ್ಲಿ ದಸರಾ ಪ್ರಯುಕ್ತ ಹುಲಿವೇಷ ಕುಣಿತ ತಂಡವು ಶಾಲೆಗೆ ಬಂದು ಕುಣಿದು ಮಕ್ಕಳನ್ನು ಮನ ರಂಜಿಸಿತು.
No comments:
Post a Comment