ಬೆಳಕಿನ ಹಬ್ಬವಾದ ದೀಪಾವಳಿಯನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನಲ್ಲಿ ಸರಳವಾಗಿ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ರವರು ದೀಪಾವಳಿ ಹಬ್ಬದ ವಿಶೇಷತೆ ಹಾಗೂ ಹಿನ್ನೆಲೆಯನ್ನು ಮಕ್ಕಳಿಗೆ ತಿಳಿಸಿದರು. ಆ ಬಳಿಕ ಹಣತೆಗಳನ್ನು ಹಚ್ಚಲಾಯಿತು. ಬಳಿಕ ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು. ಇದೇ ಸಂದರ್ಭದಲ್ಲಿ ಮಾಲ್ಟ್ ಜೊತೆಗೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಹಿರಿಯ ಸದಸ್ಯರಾದ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣರವರು ಶಾಲಾ ಮಕ್ಕಳಿಗೆ ನೀಡಿದ ಲಡ್ಡುಗಳನ್ನು ವಿತರಿಸಲಾಯಿತು. ಶಾಲಾ ಶಿಕ್ಷಕಿಯರು ಜೊತೆಗಿದ್ದು ಸಹಕರಿಸಿದರು.










No comments:
Post a Comment