ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೀಂಜ ಪಂಚಾಯತ್ ವತಿಯಿಂದ ದೊರೆತ ಶೌಚಾಲಯಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಉದ್ಘಾಟನೆಯನ್ನು ಮೀಂಜ ಗ್ರಾಮ ಪಂಚಾಯತು ಅಧ್ಯಕ್ಷೆಯಾದ ಸುಂದರಿ ಆರ್ ಶೆಟ್ಟಿ ನೆರವೇರಿಸಿದರು.ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು, ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆಯಾದ ಸರಸ್ವತಿ ಕೆ ಶುಭ ಹಾರೈಸಿದರು. ಇಂಜಿನಿಯರ್ ಸಾಯಿತ್ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ. ವಂದಿಸಿದರು.



No comments:
Post a Comment