FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday, 5 June 2026

ಕುಳೂರು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ :

          ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. 

        ಕಾರ್ಯಕ್ರಮದಂಗವಾಗಿ ಶಾಲಾ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ವಾರ್ಡ್ ಸದಸ್ಯರಾದ ಶ್ರೀಮತಿ ಶರ್ಮಿಳ ಎಂ ಶೆಟ್ಟಿ ಚಾರ್ಲ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ 'ನಮ್ಮ ಉತ್ತಮ ಭವಿಷ್ಯಕ್ಕೆ ನಮ್ಮ ಪರಿಸರವನ್ನು ಸುಂದರವಾಗಿರಿಸಬೇಕು. ಪರಿಸರಕ್ಕೆ ಹಾನಿಯಾಗುವಂತಹ ಪ್ಲಾಸ್ಟಿಕ್ ನಂತಹ ಬಳಕೆಯನ್ನು ಕಡಿಮೆ‌ ಮಾಡಬೇಕು." ಎಂದರು. ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಅಧ್ಯಕ್ಷತೆ ವಹಿಸಿದ್ದರು.

          ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಲಾ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ವಂದಿಸಿದರು. ಶಾಲಾ ಶಿಕ್ಷಕಿಯರಾದ ಶ್ರೀಮತಿ ನಯನ ಎಂ, ಶ್ರೀಮತಿ ಅಶ್ವಿನಿ ಎಂ, ಶ್ರೀಮತಿ ಶ್ವೇತ ಇ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ಶ್ರೀ ಶೇಖ್ ಅಬ್ದುಲ್‌ ಮಜೀದ್ ಚಾರ್ಲ ರವರು ಉಪಸ್ಥಿತರಿದ್ದು ಸಹಕರಿಸಿದರು.

         ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳು ಪರಿಸರ ಗೀತೆಯನ್ನು ಹಾಡಿ, ಜನ ಜಾಗೃತಿ ಮೂಡಿಸುವಂತಹ ಪೋಸ್ಟರ್ ನಿರ್ಮಾಣ ಮಾಡಿದರು.













No comments:

Post a Comment