ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಮಕ್ಕಳಿಗೆ ಮಾದಕ ದ್ರವ್ಯಗಳ ವಿರುದ್ಧ ಮಕ್ಕಳಿಗೆ ಜಾಗೃತಿ ಮೂಡಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ. ರವರು ಶಾಲಾ ಮಕ್ಕಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿಶೇಷ ತರಗತಿ ನಡೆಸಿಕೊಟ್ಟರು. ಜೊತೆಗೆ ಮಾದಕ ದ್ರವ್ಯಗಳ ವಿರುದ್ಧ ಪ್ರತಿಜ್ಞೆಯನ್ನು ಬೋಧಿಸಿದರು. ಶಾಲಾ ಮಕ್ಕಳಿಗೆ ಮಾದಕ ವಸ್ತುಗಳ ವಿರುದ್ಧ ಘೋಷಣಾ ವಾಕ್ಯ ರಚನೆ ಹಾಗೂ ಪೋಸ್ಟರ್ ತಯಾರಿ ಚಟುವಟಿಕೆಗಳನ್ನು ನಡೆಸಲಾಯಿತು.
ಶಾಲಾ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ನಯನ ಎಂ. ವಂದಿಸಿದರು.








No comments:
Post a Comment