ಮಕ್ಕಳ ಪ್ರತಿಭೆಗೆ ಒಂದು ಉತ್ತಮ ವೇದಿಕೆಯನ್ನು ಕಲ್ಪಿಸುವ ಬಾಲ ಸಭೆ ಹಾಗೂ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.
ಕಾರ್ಯಕ್ರಮವನ್ನು ಬಿ.ಆರ್.ಸಿ.ಯ ಐ.ಆರ್.ಸಿ. ಕೋರ್ಡಿನೇಟರ್ ಶ್ರೀಮತಿ ಮೋಹಿನಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿ.ಆರ್.ಸಿ. ಯ ಶಿಕ್ಷಕಿ ಶ್ರೀಮತಿ ಶಾರದಾರವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕಿ ಶ್ರೀಮತಿ ಸೌಮ್ಯ ಪಿ. ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ನಯನ ಎಂ. ವಂದಿಸಿದರು.



No comments:
Post a Comment