ದೇಶ ಕಂಡ ಮಹಾನ್ ನಾಯಕರಾದ ಮೋಹನ್‌ದಾಸ್ ಕರಮ ಚಂದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆಯ ಪ್ರಯುಕ್ತ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವನಾ ವಾರಾಚರಣೆಯನ್ನು ಆಚರಿಸಲಾಯಿತು.
ಮಹಾತ್ಮಾ ಗಾಂಧೀಜಿಯವರ 177 ನೇ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ 122 ನೇ ಜಯಂತಿಯ ಪ್ರಯುಕ್ತ ಅವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು.ಬಳಿಕ ಶಾಲಾ ಪರಿಸರ ಹಾಗೂ ಶಾಲಾ ತರಕಾರಿ ತೋಟದ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಈ ಕಾರ್ಯದಲ್ಲಿ ಶಾಲಾ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಶ್ವೇತಾ ಕೇಮಜಲ್, ಉಪಾಧ್ಯಕ್ಷೆ ಶ್ರೀಮತಿ ಪ್ರಿಯಾಂಕ ಕೇಮಜಲ್, ಪಿ.ಟಿ.ಎ. ಸದಸ್ಯರಾದ ಶ್ರೀ ಶೇಖ್ ಅಬ್ದುಲ್ ಮಜೀದ್ ಚಾರ್ಲ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಹಾಗೂ ಶಿಕ್ಷಕಿಯರಾದ ಶ್ರೀಮತಿ ಸೌಮ್ಯ ಪಿ, ಶ್ರೀಮತಿ ಶ್ವೇತಾ ಇ, ಅಶ್ವಿನಿ ಎಂ, ಶಿಕ್ಷಕರಾದ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಮೊದಲಾದವರು ಕೈ ಜೋಡಿಸಿದರು. ಲಘು ಉಪಹಾರದ ವ್ಯವಸ್ಥೆ ಮಾಡಲಾಯಿತು.
ಸ್ವಚ್ಚತಾ ಕಾರ್ಯಕ್ರಮದಲ್ಲಿ ಕೈ ಜೋಡಿಸಿದ ಎಲ್ಲರಿಗೂ ಶಾಲಾ ಪರವಾಗಿ ಧನ್ಯವಾದಗಳನ್ನು ಅರ್ಪಿಸಲಾಯಿತು.









No comments:
Post a Comment