ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 70 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಬೆಳಿಗ್ಗೆ ಆಕರ್ಷಕ ಮೆರವಣಿಗೆಯು ನಡೆಯಿತು. ಬಳಿಕ ನಡೆದ ಧ್ವಜಾರೋಹಣವನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿಯವರು ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ, ಹಾಗೂ ಶಾಲಾ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಮಮತಾ ಉಪಸ್ಥಿತರಿದ್ದರು. ಶ್ರೀ ನಾರಾಯಣ ನಾೈಕ್ ಹಾಗೂ ಶ್ರೀ ಹರಿರಾಮ್ ಶುಭಾಶಂಸನೆಗೈದರು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಸ್ವಾಗತಿಸಿ, ಅಧ್ಯಾಪಿಕೆ ಶ್ರೀಮತಿ ಸೌಮ್ಯ ಪಿ ವಂದಿಸಿದರು. ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಜರಗಿದವು. ಇದೇ ಸಂದರ್ಭದಲ್ಲಿ ಶಾಲಾ ಹಳೇ ವಿದ್ಯಾರ್ಥಿಗಳು, ಊರ ಬಾಂಧವರು ಸಿಹಿತಿಂಡಿಗಳನ್ನು ಹಂಚಿದರು.

No comments:
Post a Comment