ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಮಹಾಸಭೆ ನಡೆಯಿತು.
ಶಾಲಾ ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಹಳೆ ವಿದ್ಯಾರ್ಥಿಗಳ ಸಂಘದ ರೂಪೀಕರಣವಾಯಿತು. ಅಧ್ಯಕ್ಷರಾಗಿ ಶ್ರೀ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷರಾಗಿ ಶ್ರೀ ಚಿಕ್ಕಪ್ಪ ಶೆಟ್ಟಿ ಹಾಗೂ ಶ್ರೀಮತಿ ಕೃಷ್ಣವೇಣಿ, ಕಾರ್ಯದರ್ಶಿಯಾಗಿ ಶ್ರೀ ಹರಿರಾಮ್ ಕುಳೂರು, ಜತೆ ಕಾರ್ಯದರ್ಶಿಗಳಾಗಿ ಶ್ರೀ ವಸಂತ ಪೂಜಾರಿ ಕುಳೂರು ಹಾಗೂ ಉಷಾ ಪೂಂಜ, ಕೋಶಾಧಿಕಾರಿಯಾಗಿ ಶ್ರೀ ಜಗದೀಶ ಶೆಟ್ಟಿ ಮಾಸ್ಟರ್ ಕುಳೂರು ಅವಿರೋಧವಾಗಿ ಆಯ್ಕೆಯಾದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ ಸ್ವಾಗತಿಸಿ, ಸೌಮ್ಯ ಪಿ ವಂದಿಸಿದರು. ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮವನ್ನು ನಿರ್ವಹಿಸಿದರು.
No comments:
Post a Comment