ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೀಂಜ ಪಂಚಾಯತ್ ಮಟ್ಟದ ಪ್ರವೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಶಾಲೆಗೆ ಸೇರಿದ ನವಾಗತ ಮಕ್ಕಳನ್ನು ಆಕರ್ಷಕ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮೀಂಜ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶಂಶಾದ್ ಶುಕೂರ್ ನೆರವೇರಿಸಿದರು. ಬಿ.ಆರ್.ಸಿ ತರಬೇತುದಾರರಾರ ಸಜಿತ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಮೀಂಜ ಪಂಚಾಯತ್ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀ ಕೃಷ್ಣ ಕೊಮ್ಮಂಗಳ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಮೊಹಮ್ಮದ್ ಕಂಚಿಲ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ, ಶಾಲಾ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಮಮತಾ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಟಿ.ಡಿ ಸದಾಶಿವ ರಾವ್ ಹಾಗೂ ಬಿ.ಆರ್. ಸಿ ತರಬೇತಿದಾರರಾದ ಸಂಜು ಉಪಸ್ಥಿತರಿದ್ದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ಶ್ರೀ ನಿತ್ಯಾನಂದ ಶೆಟ್ಟಿ ಕುಳೂರು ಕನ್ಯಾನ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತ ಬ್ಯಾಗ್, ಕೊಡೆ, ಪುಸ್ತಕ ಹಾಗೂ ಕಲಿಕೋಪಕರಣಗಳನ್ನು ಶ್ರೀ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ ರವರು ವಿತರಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ ರವರು ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ವಂದಿಸಿದರು. ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.

No comments:
Post a Comment