FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday, 31 August 2017

ಓಣಂ ಆಚರಣೆ:

                 ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓಣಂ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
                  ಆ ಪ್ರಯುಕ್ತ ಆಕರ್ಷಕ ಹೂವಿನ ರಂಗೋಲಿಯನ್ನು ಬಿಡಿಸಲಾಯಿತು. ಶಾಲಾ ವಿದ್ಯಾರ್ಥಿ ಶ್ರೇಣಿಕ್ ಕರ್ಕೇರ ಹಾಕಿದ ಮಹಾಬಲಿಯ ವೇಷ ಎಲ್ಲರ ಗಮನ ಸೆಳೆಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನಿತ್ತರು. ಶಾಲಾ ಪಿ.ಟಿ.ಎ ಅಧ್ಯಕ್ಷರಾದ ಪ್ರಮೋದ್ ಶೆಟ್ಟಿ ಶಾಲೆದಪಡ್ಪು, ಮಾತೃ ಸಂಘದ ಅಧ್ಯಕ್ಷೆಯಾದ ಆಶಾಲತಾ ಕುಳೂರು, ಉಪಾಧ್ಯಕ್ಷೆ ಸೌಮ್ಯಲತಾ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಉಷಾ ಪೂಂಜ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಉಪಕಾರ್ಯದರ್ಶಿ ವಸಂತ ಪೂಜಾರಿ ಕುಳೂರು, ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಸದಾಶಿವ ಸೇನವ ಕುಳೂರು, ರಘುನಾಥ ಕುಳೂರು, ಶಶಿ ಕುಮಾರ್ ಕುಳೂರು, ಅಧ್ಯಾಪಕ ವೃಂದ ಹಾಗೂ ಪಿ.ಟಿ.ಎ ಸದಸ್ಯರು ಉಪಸ್ಥಿತರಿದ್ದರು. ಮಧ್ಯಾಹ್ನ ವಿಶೇಷ ಓಣಂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಬಳಿಕ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಮನೋರಂಜನಾ ಆಟಗಳನ್ನು ಏರ್ಪಡಿಸಲಾಯಿತು.











No comments:

Post a Comment