FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday, 28 September 2017

ದಸರಾ ಆಚರಣೆ:

               ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದಸರಾ ಆಚರಣೆಯನ್ನು ಆಚರಿಸಲಾಯಿತು.
ಆ ಪ್ರಯುಕ್ತ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳು ಹಾಗೂ ಮನೋರಂಜನಾ ಆಟಗಳನ್ನು ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ, ಮಧೂರು ಶಾಲೆಯ ಮುಖ್ಯೋಪಾಧ್ಯಾಯರಾದ ವಿನೋದ್ ಕುಮಾರ್ ಬಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹರಿರಾಮ ಕುಳೂರು, ಶಾಲಾ ಮಾತೃ ಮಂಡಳಿ ಅಧ್ಯಕ್ಷೆ ಆಶಾಲತಾ ಕುಳೂರು, ಉಪಾಧ್ಯಕ್ಷೆ ಸೌಮ್ಯಲತಾ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಸುಬ್ರಾಯ ಆಚಾರ್ಯ, ಜಯರಾಜ್ ಶೆಟ್ಟಿ ಚಾರ್ಲ, ಜನಾರ್ದನ ಪೂಜಾರಿ, ಶಶಿಕುಮಾರ್ ಕುಳೂರು, ರಘುನಾಥ ಕೆ, ಅಧ್ಯಾಪಿಕೆಯರಾದ ಶ್ವೇತಾ, ರೇಶ್ಮಾ, ಶಾಲಾ ಪಿ.ಟಿ.ಎ ಹಾಗೂ ಮಾತೃ ಸಂಘದ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಸ್ವಾಗತಿಸಿ, ಸೌಮ್ಯ ಪಿ ವಂದಿಸಿದರು. ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಡೆಸಿಕೊಟ್ಟರು.




No comments:

Post a Comment