FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday, 6 August 2017

ಶ್ರಮದಾನ ಹಾಗೂ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ

                 ತಾ. 06-08-2017 ರಂದು ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲೋದ್ಯಾನದಲ್ಲಿ ಶ್ರಮದಾನ ಹಾಗೂ ಜಂಪಿಂಗ್ ಪಿಟ್ ನಿರ್ಮಾಣ ಕಾರ್ಯ ನಡೆಯಿತು. ಶಾಲಾ ಪಿ.ಟಿ.ಎ ಅಧ್ಯಕ್ಷರಾದ ಶ್ರೀ ಪ್ರಮೋದ್ ಕುಮಾರ್ ಶಾಲೆದಪಡ್ಪು ರವರ ವತಿಯಿಂದ ಎಲ್ಲರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ಸಂಜೆ ಸ್ವಾತಂತ್ರ್ಯೋತ್ಸವದ ಪೂರ್ವಭಾವಿಯಾಗಿ ಕಾರ್ಯಕ್ರಮದ ಆಯೋಜನೆಗೆ ಹಳೆ ವಿದ್ಯಾರ್ಥಿಗಳ ಹಾಗೂ ಪಿ.ಟಿ.ಎ ಸದಸ್ಯರ ಸಭೆಯನ್ನು ಕರೆಯಲಾಯಿತು. ಈ ಸಭೆಯಲ್ಲಿ ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಕಂಚಿಲ, ಪಿ.ಟಿ.ಎ ಅಧ್ಯಕ್ಷರಾದ ಶ್ರೀ ಪ್ರಮೋದ್ ಶೆಟ್ಟಿ ಶಾಲೆದಪಡ್ಪು, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಪ್ರಧಾನ ಕಾರ್ಯದರ್ಶಿ ಶ್ರೀ ಹರಿರಾಮ ಕುಳೂರು ಹಾಗೂ ಅನೇಕ ಹಳೆ ವಿದ್ಯಾರ್ಥಿಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಿದರು. 










No comments:

Post a Comment