ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 71 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಮಕ್ಕಳಿಂದ ಆಕರ್ಷಕ ಮೆರವಣಿಗೆಯು ನಡೆಯಿತು. ಮೆರವಣಿಗೆಯಲ್ಲಿ ಮಕ್ಕಳು ಹಾಕಿದ ಸ್ವಾತಂತ್ರ್ಯ ಹೋರಾಟಗಾರರ ವೇಷವು ಎಲ್ಲರ ಗಮನ ಸೆಳೆಯಿತು. ಬಳಿಕ ನಡೆದ ಧ್ವಜಾರೋಹಣವನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ ರವರು ನೆರವೇರಿಸಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷ ಶ್ರೀ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ, ಉದ್ಯಮಿ ಶ್ರೀ ಪಿ.ಆರ್.ಶೆಟ್ಟಿ ಪೊಯ್ಯೆಲ್, ಶಾಲಾ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಆಶಾಲತಾ ಕುಳೂರು, ಶ್ರೀ ನಾರಾಯಣ ನೈಕ್ ನಡುಹಿತ್ಲು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಮೊಹಮ್ಮದ್ ಕಂಚಿಲ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ಹರಿರಾಮ ಕುಳೂರು ವಂದಿಸಿದರು. ಶಾಲಾ ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಜರಗಿದವು. ವಿವಿಧ ಸಂಘ ಸಂಸ್ಥೆಗಳು, ವಿದ್ಯಾಭಿಮಾನಿಗಳು ಸಿಹಿತಿಂಡಿಗಳ ವ್ಯವಸ್ಥೆಯನ್ನು ಮಾಡಿದ್ದರು. ಎಲ್ಲರಿಗೂ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.

No comments:
Post a Comment