ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಕ್ಷಕ-ಶಿಕ್ಷಕ ಸಂಘಕ್ಕೆ 2016-17 ನೇ ಸಾಲಿನ ಮಂಜೇಶ್ವರ ಉಪಜಿಲ್ಲಾ ಮಟ್ಟದ 'ಉತ್ತಮ ರಕ್ಷಕ-ಶಿಕ್ಷಕ ಸಂಘ ಪ್ರಶಸ್ತಿ'ಯು ದೊರತಿದ್ದು ಇದನ್ನು ಕಾಸರಗೋಡು ಶಾಸಕರಾದ ಎನ್.ಎ ನೆಲ್ಲಿಕುನ್ನು ಅವರು ಸರಕಾರಿ ಪ್ರೌಢಶಾಲೆ ಕುಂಬ್ಳೆಯಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಂದು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ, ಮಾತೃ ಸಂಘದ ಉಪಾಧ್ಯಕ್ಷೆ ಸೌಮ್ಯಲತಾ, ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಉಪಸ್ಥಿತರಿದ್ದು ಪ್ರಶಸ್ತಿ ಸ್ವೀಕರಿಸಿದರು. ಶಾಲಾ ಮಾತೃ ಸಂಘ, ಹಳೆ ವಿದ್ಯಾರ್ಥಿ ಸಂಘ, ಶಾಲಾ ಅಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಉತ್ತಮ ರಕ್ಷಕ-ಶಿಕ್ಷಕ ಸಂಘ ಪ್ರಶಸ್ತಿ ಪಡೆದ ಪಿ.ಟಿ.ಎ ಗೆ ಅಭಿನಂದನೆ ಸಲ್ಲಿಸಿದ್ದಾರೆ.
No comments:
Post a Comment