ಶಾಲಾ ವಾರ್ಷಿಕೋತ್ಸವದ ಯಶಸ್ಸಿನ ನಂತರ ಶಾಲಾ ಹಳೆ ವಿದ್ಯಾರ್ಥಿ ಸಂಘದ ಸಭೆಯನ್ನು ಕರೆಯಲಾಯಿತು. ಸಭೆಯ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ ವಹಿಸಿದ್ದರು. ಸಭೆಯಲ್ಲಿ ವಾರ್ಷಿಕೋತ್ಸವವನ್ನು ಯಶಸ್ವಿಗೊಳಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವಿನೋದ್ ಕುಮಾರ್ ಬಿ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಜಗದೀಶ್ ಶೆಟ್ಟಿ ಎಲಿಯಾಣ, ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹರಿರಾಮ ಕುಳೂರು ಸ್ವಾಗತಿಸಿ, ಸದಸ್ಯರಾದ ಶಶಿಕುಮಾರ್ ಕುಳೂರು ವಂದಿಸಿದರು.
No comments:
Post a Comment