FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Tuesday, 5 June 2018

ಪರಿಸರ ದಿನಾಚರಣೆ

          ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಆ ಪ್ರಯುಕ್ತ ಶಾಲಾ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ಮಕ್ಕಳಿಗೆ ಸಸಿಗಳನ್ನು ವಿತರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರು ಪರಿಸರ ದಿನದ ಮಹತ್ವವನ್ನು ಮಕ್ಕಳಿಗೆ ವಿವರಿಸಿದರು. ಬಳಿಕ ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು. ಶಾಲಾ ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ, ಅಧ್ಯಾಪಿಕೆಯರಾದ ಸೌಮ್ಯ ಪಿ, ನಯನ ಬೇರಿಕೆ, ಅಶ್ವಿನಿ ಎಲಿಯಾಣ, ನವಿನಾಕ್ಷಿ ಚಾರ್ಲ, ಸಹಾಯಕಿಯರಾದ ಲತ, ಜಲಜ ಪೊಯ್ಯೆಲ್, ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಜಯರಾಜ್ ಶೆಟ್ಟಿ ಚಾರ್ಲ, ಶಶಿಕುಮಾರ್ ಕುಳೂರು, ಶಿವರಾಜ್ ಕುಳೂರು ಉಪಸ್ಥಿತರಿದ್ದು ಸಹಕರಿಸಿದರು.
 








No comments:

Post a Comment