ಮಳೆಗಾಲದ ಸಂದರ್ಭದಲ್ಲಿ ಬರುವ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮೀಂಜ ಗ್ರಾಮ ಪಂಚಾಯತಿನ ನೇತೃತ್ವದಲ್ಲಿ 'ಜಾಗೃತೋತ್ಸವ 2018' ಎನ್ನುವ ಕಾರ್ಯಕ್ರಮವನ್ನು ಶಾಲೆಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ. ಪಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ವಿಜಯಲಕ್ಷ್ಮಿ ಟೀಚರ್, ಮಾಜಿ ಪಂಚಾಯತ್ ಸದಸ್ಯ ಬಾಲಪ್ಪ ಬಂಗೇರ ಉಪಸ್ಥಿತರಿದ್ದರು. ಬಳಿಕ ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಧಾನ ವೈದ್ಯಾಧಿಕಾರಿ ಡಾ. ಪ್ರಭಾಕರ ರೈ ಆರೋಗ್ಯ ಮಾಹಿತಿಯನ್ನು ನೀಡಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.
No comments:
Post a Comment