ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರವೇಶೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.
ಶಾಲೆಗೆ ಸೇರಿದ ನವಾಗತ ಮಕ್ಕಳನ್ನು ಆಕರ್ಷಕ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಬಳಿಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕೊಡಲ್ಪಟ್ಟ ಶಾಲಾ ವಾಹನದ ಉದ್ಘಾಟನೆಯನ್ನು ಕುಳೂರು ಕನ್ಯಾನದ ಶ್ರೀಮತಿ ಲೀಲಾವತಿ ಪಿ ಶೆಟ್ಟಿ ನೆರವೇರಿಸಿದರು. ಪ್ರೀ-ಪ್ರೈಮರಿ ತರಗತಿಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲರವರು ಉದ್ಘಾಟಿಸಿದರು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ರ್ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್, ಶಾಲಾ ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು ಉಪಸ್ಥಿತರಿದ್ದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕಂಬಳ ಸಮಿತಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ಆರ್.ಶೆಟ್ಟಿ ಪೊಯ್ಯೆಲ್ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಪಿ ರವರು ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ವಂದಿಸಿದರು. ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ನಯನ ಬೇರಿಕೆ, ನವಿನಾಕ್ಷಿ ಚಾರ್ಲ, ಅಶ್ವಿನಿ ಎಲಿಯಾಣ, ಲತಾ, ಜಲಜ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಉಪಾಧ್ಯಕ್ಷೆ ಕೃಷ್ಣವೇಣಿ ಪಾದೆ ಕುಳೂರು, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಜತೆ ಕಾರ್ಯದರ್ಶಿ ವಸಂತ ಪೂಜಾರಿ ಕುಳೂರು, ನಾರಾಯಣ ನೈಕ್ ನಡುಹಿತ್ಲು, ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಜನಾರ್ದನ ಪೂಜಾರಿ ಕುಳೂರು, ಜಯರಾಜ್ ಶೆಟ್ಟಿ ಚಾರ್ಲ, ಸುಬ್ರಾಯ ಆಚಾರ್ಯ, ಚಂದ್ರಹಾಸ ಪೂಜಾರಿ ಕುಳೂರು, ರಘುರಾಮ ಶೆಟ್ಟಿ ಎಲಿಯಾಣ, ಶಶಿಕುಮಾರ್ ಕುಳೂರು ಹಾಗೂ ಇತರರು ಉಪಸ್ಥಿತರಿದ್ದರು.
No comments:
Post a Comment