ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ. ಪಿ ಉಗ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ, ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಆಶಾಲತ ಕುಳೂರು ಉಪಸ್ಥಿತರಿದ್ದರು. ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ. ಪಿ ಶಾಲಾ ಮಕ್ಕಳಿಗೆ ಸರಕಾರದಿಂದ ಲಭಿಸಿದ ಉಚಿತ ಸಮವಸ್ತ್ರವನ್ನು ವಿತರಿಸಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.
No comments:
Post a Comment